►ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ದೆಹಲಿ ವಿಮಾನ ನಿಲ್ದಾಣ
ನವದೆಹಲಿ: ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಪೋಗಟ್ ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ.
ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಪದಕ ಗೆಲ್ಲಲಾಗದ ನೋವಿನಲ್ಲಿದ್ದ ವಿನೇಶ್ ಅಭಿಮಾನಿಗಳನ್ನು ಕಂಡ ತಕ್ಷಣ ಜೋರಾಗಿ ಅಳುತ್ತಾ ಕೈ ಮುಗಿದು ಧನ್ಯವಾದ ತಿಳಿಸಿದರು.
ಕುಟುಂಬದ ಸದಸ್ಯರು, ಮಾಜಿ ಒಲಿಂಪಿನ್, ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ಈ ವೇಳೆ ಜತೆಗಿದ್ದರು.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮಹಿಳೆಯರ ಕುಸ್ತಿ 50 ಕೆ.ಜಿ ವಿಭಾಗದಲ್ಲಿ ಉತ್ಕೃಷ್ಟ ಪ್ರದರ್ಶನ ತೋರುವ ಮೂಲಕ ಫೈನಲ್ ತಲುಪಿದ್ದ ವಿನೇಶ್ ಅವರು ಇನ್ನೇನು ಫೈನಲ್ ಆಡಲು ಕೆಲವೇ ಗಂಟೆಗಳು ಬಾಕಿ ಇರುವಾಗ ಅವರನ್ನು ಅನರ್ಹ ಎಂದು ಘೋಷಿಸಲಾಯಿತು. ದೇಹತೂಕದಲ್ಲಿ ನಿಗದಿತ ಸ್ಪರ್ಧೆಯ ತೂಕಕ್ಕಿಂತ 100 ಗ್ರಾಂ ಹೆಚ್ಚಾದ ಕಾರಣಕ್ಕೆ ಅವರು ಅನರ್ಹಗೊಂಡಿದ್ದರು.
Vinesh Phogat returns back home. Grand welcome but tears in her eyes.
— The Bridge (@the_bridge_in) August 17, 2024
Chin up champion, you've made us all so proud❤️#VineshPhogat #ParisOlympicspic.twitter.com/uXVn3tlBaW