ವಿನೇಶ್ ಫೋಗಟ್ ಗೆ ಚಿನ್ನದ ಪದಕ ನೀಡಿ ಗೌರವಿಸಿದ ಗ್ರಾಮಸ್ಥರು..!

Prasthutha|

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಫೈನಲ್ ಗೆ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ತಾಯ್ನಾಡಿಗೆ ಮರಳಿದ್ದಾರೆ.

- Advertisement -


ಭಾರತಕ್ಕೆ ಆಗಮಿಸಿದ ವಿನೇಶ್ ಅವರನ್ನು ಆಪ್ತರು ಮತ್ತು ಅಭಿಮಾನಿಗಳು ಬರದಿಂದ ಸ್ವಾಗತಿಸಿದ್ದಾರೆ.


ಅದರಲ್ಲೂ ಫೋಗಟ್ ಅವರ ಗ್ರಾಮಸ್ಥರು ತಮ್ಮ ನಾಡಿನ ಸಾಧಕಿಯನ್ನು ವಿಶೇಷ ಸಮಾರಂಭದ ಮೂಲಕ ಸನ್ಮಾನಿಸಿದ್ದಾರೆ. ಇದೇ ವೇಳೆ ಅವರಿಗೆ ಚಿನ್ನದ ಪದಕವನ್ನು ನೀಡಿದ್ದು ವಿಶೇಷವಾಗಿತ್ತು.
ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳೆಯರ 50 ಕೆಜಿ ತೂಕದ ವಿಭಾಗದಲ್ಲಿ ವಿನೇಶ್ ಫೋಗಟ್ ಫೈನಲ್ ಗೆ ಪ್ರವೇಶಿಸಿದ್ದರು. ಆದರೆ ಫೈನಲ್ ಪಂದ್ಯಕ್ಕೂ ನಡೆದ ತೂಕ ಪರಿಶೀಲನೆ ವೇಳೆ ಅನುಮತಿಸಲಾದ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಇದೇ ಕಾರಣದಿಂದಾಗಿ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿತ್ತು.

- Advertisement -


ಫೈನಲ್ ನಿಂದ ಅನರ್ಹಗೊಂಡ ಬಳಿಕ ಬೆಳ್ಳಿ ಪದಕಕ್ಕಾಗಿ ವಿನೇಶ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (ಸಿಎಎಸ್) ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹಲವಾರು ದಿನಗಳ ಕಾಯುವಿಕೆಯ ನಂತರ ಅಂತಿಮವಾಗಿ ಈ ಮನವಿಯನ್ನು ಸಿಎಎಸ್ ವಜಾಗೊಳಿಸಿದೆ. ಇದರೊಂದಿಗೆ ಬೆಳ್ಳಿ ಪದಕದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅವರ ಕನಸು ಕೂಡ ಭಗ್ನಗೊಂಡಿದೆ.



Join Whatsapp