ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅತ್ಯಂತ ಖಂಡನೀಯ: ವೆಲ್ಫೇರ್ ಪಾರ್ಟಿ

Prasthutha|

ಬೆಂಗಳೂರು: ಮಣಿಪುರದಲ್ಲಿ ಎರಡು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವ ಘಟನೆ ಅತ್ಯಂತ ಖಂಡನಿಯ ಮತ್ತು ಅಮನವೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮಣಿಪುರದಲ್ಲಿ ನಿರಂತರವಾಗಿ ಗಲಭೆಗಳು ನಡೆಯುತ್ತಿದ್ದು, ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಕುಟುಂಬಗಳು ಮನೆ ಬಿಟ್ಟು ಪ್ರಾಣ ಉಳಿಸಲು ರಸ್ತೆಗಳಲ್ಲಿ ಜೀವನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜು ಆಗುತ್ತಿದೆ. ಇದರ ಮಧ್ಯೆ ಮಹಿಳೆಯರ ಮೇಲೆ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಒಂದು ಮಹಿಳೆಗೆ ಮುಖದ ಮೇಲೆ ಗುಂಡಿಟ್ಟು ಕೊಲ್ಲಲಾಗಿದೆ. ಇನ್ನೊಂದು ಕಡೆ ಇಡೀ ದೇಶವೆ ತಲೆತಗ್ಗಿಸುವ ಘಟನೆ ನಡೆದಿದ್ದು, ಇಬ್ಬರು ಮಹಿಳೆಯರನ್ನು ಬೆತ್ತಲೆ ಗೊಳಿಸಿ ಮೆರವಣಿಗೆ ಮಾಡಲಾಗಿದೆ. ಇಷ್ಟೆಲ್ಲಾ ಘಟನೆಗಳು ನಡೆದರೂ ಕೂಡ ಕೇಂದ್ರ ಸರಕಾರ ಮಾತ್ರ ಮೂಕ ಪ್ರೇಕ್ಷಕನಂತೆ ವರ್ತನೆ ಮಾಡುತ್ತಿರುವುದು ಅತ್ಯಂತ ಖಂಡನಿಯ ಎಂದು ಕಿಡಿಕಾರಿದರು.

ಮಣಿಪುರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಲ್ಲಿನ ಸರಕಾರ ಸಂಪೂರ್ಣವಾಗಿ ವಿಫಲಗೊಂಡಿದೆ, ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಆ ಸರ್ಕಾರವನ್ನು ವಜಾ ಗೊಳಿಸಬೇಕು. ಅಲ್ಲಿ ರಾಜ್ಯಪಾಲರ ಆಳ್ವಿಕೆ ತರಬೇಕು ಎಂದು ತಾಹಿರ್ ಹುಸೇನ್ ಒತ್ತಾಯಿಸಿದರು.

- Advertisement -


ದೇಶದ ರಾಜಧಾನಿಯಲ್ಲಿ ಮಹಿಳಾ ಕ್ರೀಡಾಪಟುಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಪ್ರತಿಭಟನೆ ಮಾಡಿದರು. ಆ ಸಮಯದಲ್ಲೂ ಪ್ರಧಾನ ಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗ ದೇಶದಲ್ಲಿ ಮಹಿಳೆಯರು ಹೇಗೆ ಸುರಕ್ಷಿತರಾಗಲು ಸಾಧ್ಯ? ಇವರ ಮೌನವೇ ಇನ್ನಷ್ಟು ಘಟನೆಗಳಿಗೆ ಪ್ರೇರಣೆ ಆಗುತ್ತಿದೆ. ದೇಶದ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಧಾನಮಂತ್ರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಅವರು ಮನವಿ ಮಾಡಿದರು.

Join Whatsapp