Home ಟಾಪ್ ಸುದ್ದಿಗಳು ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ; ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ: ಕೊನೆಗೂ ತುಟಿ ಬಿಚ್ಚಿದ ಪ್ರಧಾನಿ...

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ; ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ: ಕೊನೆಗೂ ತುಟಿ ಬಿಚ್ಚಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ವಿಕೃತ ಮನಸ್ಸಿನ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದಿರುವ ಘಟನೆ ಬಗ್ಗೆ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ಘಟನೆಯು ಹೇಯ ಮತ್ತು ನಾಚಿಕೆಗೇಡಿನ ಸಂಗತಿ ಎಂದು ಹೇಳುವ ಮೂಲಕ ಕೃತ್ಯವನ್ನು ಖಂಡಿಸಿದ್ದಾರೆ.


ಮಹಿಳೆಯರನ್ನ ಬೆತ್ತಲೆ ಮೆರವಣಿಗೆ ಮಾಡಿದ ವಿಡಿಯೋಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಣಿಪುರ ಘಟನೆಯು ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂದು ಹೇಳಿದರು. ನಾನು ದೇಶದ ಜನತೆಗೆ ಭರವಸೆ ನೀಡುತ್ತೇನೆ. ಪ್ರಕರಣದ ತಪ್ಪಿತಸ್ಥರನ್ನ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾನೂನು ತನ್ನ ಎಲ್ಲಾ ಶಕ್ತಿಯೊಂದಿಗೆ ತನ್ನ ಕ್ರಮ ತೆಗೆದುಕೊಳ್ಳುತ್ತದೆ. ಮಣಿಪುರದ ಸಹೋದರಿಯರ ಜೊತೆಗೆ ನಡೆದ ಘಟನೆ ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದರು.

ರಾಜಸ್ಥಾನ, ಮಣಿಪುರ ಅಥವಾ ಛತ್ತೀಸ್ಗಢ ಆಗಿರಲಿ, ನಮ್ಮ ಎಲ್ಲಾ ಮಹಿಳೆಯರಿಗೆ ರಕ್ಷಣೆ ನೀಡಲು ಕಠಿಣ ಕಾನೂನು ಜಾರಿ ಮಾಡಲು ನಾನು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇನೆ. ರಾಜಕೀಯಕ್ಕಿಂತ ಮಿಗಿಲಾಗಿ ಮಹಿಳೆಯರ ರಕ್ಷಣೆ ಬಗ್ಗೆ ನಾವು ಚಿಂತಿಸಬೇಕು ಎಂದು ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಪ್ರಧಾನಿ ಮೋದಿ ಹೇಳಿದರು.

Join Whatsapp
Exit mobile version