ಮಾನವ ಹಕ್ಕುಗಳ ಕಾರ್ಯಕರ್ತನ ಬಂಧನ ಪ್ರಕರಣ: ಭುಗಿಲೆದ್ದ ಹಿಂಸಾಚಾರ

Prasthutha|

ಮಣಿಪುರ: ಮಾನವ ಹಕ್ಕುಗಳ ಕಾರ್ಯಕರ್ತನ ಬಂಧನವನ್ನು ವಿರೋಧಿಸಿ ಚುರಾಚಂದ್ ಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

- Advertisement -

ಮಣಿಪುರ ಮೂಲದ ಮಾನವ ಹಕ್ಕುಗಳ ಹೋರಾಟಗಾರ ಡಾಕ್ಟರ್ ಮಾರ್ಕ್ ತಂಗ್ಮಾಂಗ್ ಹಾಕಿಪ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿಯತ್ತ ಮೆರವಣಿಗೆ ನಡೆಸುವುದನ್ನು ತಡೆಯುತ್ತಿದ್ದಾಗ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಮಣಿಪುರದ 1949 ರ ವಿಲೀನ ಒಪ್ಪಂದದ ಕುರಿತು ಫೇಸ್ ಬುಕ್ ಪೋಸ್ಟ್ ಗಾಗಿ ಧರ್ಮದ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಮಾರ್ಕ್ ಹಾಕಿಪ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಂಗಳವಾರ ನವದೆಹಲಿಯಲ್ಲಿ ಬಂಧಿಸಲಾಗಿತ್ತು.



Join Whatsapp