ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಂಸಾಚಾರ: ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ

Prasthutha|

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಎಂಬಾತನ ಹತ್ಯೆಯ ಬಳಿಕ ಶಿವಮೊಗ್ಗ ನಗರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಮೃತದೇಹದ ಮೆರವಣಿಗೆಯ ವೇಳೆ ಮೆರವಣಿಗೆಯಲ್ಲಿದ್ದವರು ಸಿಕ್ಕ ಸಿಕ್ಕ ಅಂಗಡಿ, ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಬೆಂಕಿ ಹಚ್ಚಿ ಹಿಂಸಾಚಾರದಲ್ಲಿ ತೊಡಗಿದ್ದಾರೆ.

- Advertisement -

ನಿನ್ನೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷನ ಅಂತಿಮ ಯಾತ್ರೆ ವೇಳೆ ಸಿದ್ದಯ್ಯ ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಲಾಗಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

ಹರ್ಷನ ನಿವಾಸಕ್ಕೆ ಮೃತದೇಹ ತಂದ ನಂತರ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಅಂತಿಮ ದರ್ಶನ ಪಡೆದರು. ನಂತರ ಅಲ್ಲಿಂದ ರೋಟರಿ ಚಿತಾಗಾರಕ್ಕೆ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆ ಸಿದ್ದಯ್ಯ ರಸ್ತೆ ತಲುಪುತ್ತಿದ್ದಂತೆಯೇ ಏಕಾಏಕಿ ಮತ್ತೆ ಕಲ್ಲುತೂರಾಟ ಆರಂಭವಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಟ್ಟರು.

- Advertisement -

ಕಲ್ಲು ತೂರಾಟದಿಂದ ಹಲವು ಮಂದಿಗೆ ಗಾಯವಾಗಿದ್ದು, ಓರ್ವನಿಗೆ ಗಂಭೀರವಾದ ಗಾಯವಾಗಿದೆ ಎಂದು ವರದಿಯಾಗಿದೆ. ಇಬ್ಬರು ಪತ್ರಕರ್ತರಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಪ್ರಹಾರ ನಡೆಸಲಾಗಿದ್ದು, ಕೆಲವು ಕಡೆಗಳಲ್ಲಿ ಟಿಯರ್ ಗ್ಯಾಸ್ ಪ್ರಯೋಗ ಮಾಡಲಾಗಿದೆ.

ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ.

Join Whatsapp