ನವದೆಹಲಿ: ಎಎಪಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ವಿಐಪಿ ಸೌಲಭ್ಯ ನೀಡಿದ್ದ ತಿಹಾರ್ ಜೈಲಿನ ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಕುಮಾರ್ ಎಂಬವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರ ಸಚಿವ ಸತ್ಯೇಂದ್ರ ಜೈನ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿ ಜೈಲಿಗಟ್ಟಿದ್ದರು.
ಸದ್ಯ ವಿಚಾರಣಾ ಕೈದಿಯಾಗಿರುವ ಸಚಿವ ಸತ್ಯೇಂದ್ರ ಅವರಿಗೆ ವಿಐಪಿ ಕೆಟಗೆರಿಯ ಸೌಲಭ್ಯ ನೀಡಿದ ಘಟನೆಗೆ ಸಂಬಂಧಿಸಿದಂತೆ ಜೈಲು ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.