ದುಬೈ: ಮುಂದಿನ ತಿಂಗಳು ದುಬೈನಲ್ಲಿ ನಡೆಯಲಿರುವ ಟಿ -20 ವಿಶ್ವಕಪ್ ಬಳಿಕ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗುರುವಾರ ಘೋಷಿಸಿದ್ದಾರೆ.
ಈ ಬಗ್ಗೆ ತನ್ನ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಸುದ್ದಿ ಮುಟ್ಟಿಸಿದರು.
ನನ್ನ ನಿಕಟವರ್ತಿಗಳಾದ ರವಿ ಭಾಯಿ ಮತ್ತು ರೋಹಿತ್ ಅವರೊಂದಿಗೆ ಸಾಕಷ್ಟು ಆಲೋಚನೆ ಮತ್ತು ಚರ್ಚೆಯ ನಂತರ, ಅಕ್ಟೋಬರ್ನಲ್ಲಿ ದುಬೈನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ನಂತರ ಟಿ 20 ನಾಯಕನ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಅಧ್ಯಕ್ಷ ಸೌರವ್ ಗಂಗೂಲಿ ಅವರೊಂದಿಗೆ ತಮ್ಮ ನಿರ್ಧಾರದ ಬಗ್ಗೆ ಮಾತನಾಡಿರುವುದಾಗಿ ಅವರು ಹೇಳಿದರು.
ನಾನು ಭಾರತವನ್ನು ಪ್ರತಿನಿಧಿಸುವುದಷ್ಟೇ ಅಲ್ಲದೇ ಭಾರತೀಯ ಕ್ರಿಕೆಟ್ ತಂಡವನ್ನು ನನ್ನ ಅತ್ಯುತ್ತಮ ಸಾಮರ್ಥ್ಯದತ್ತ ಮುನ್ನಡೆಸುವ ಅದೃಷ್ಟವನ್ನು ಹೊಂದಿದ್ದೇನೆ. ಭಾರತೀಯ ಕ್ರಿಕೆಟ್ ತಂಡದ ನಾಯಕನಾಗಿ ನನ್ನ ಪಯಣದಲ್ಲಿ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಅವರಿಲ್ಲದೆ ನಾನು ಅದನ್ನು ಮಾಡಲು ಸಾಧ್ಯವಿಲ್ಲ. ಸಹಾಯಕ ಸಿಬ್ಬಂದಿ, ಆಯ್ಕೆ ಸಮಿತಿ, ನನ್ನ ತರಬೇತುದಾರರು ಮತ್ತು ನಾವು ಗೆಲ್ಲಲು ಪ್ರಾರ್ಥಿಸಿದ ಪ್ರತಿಯೊಬ್ಬ ಭಾರತೀಯರಿಗೆ ಧನ್ಯವಾದಗಳು ಎಂದು ಅವರು ಹೇಳಿದ್ದಾರೆ.