ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿರಾಟ್ ಕೊಹ್ಲಿ ವಿದಾಯ

Prasthutha|

ಬಾರ್ಬಡೋಸ್‌: ಭಾರತ ಎರಡನೇ ಬಾರಿಗೆ ಟಿ20 ವಿಶ್ವಕಪ್‌ ಪ್ರಶಸ್ತಿ ಗೆದ್ದಿದ್ದು, ಇಡೀ ದೇಶಾದ್ಯಂತ ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮೂಡಿಸಿದೆ. 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಭಾರತ ಗೆದ್ದದ್ದಲ್ಲದೆ 11 ವರ್ಷಗಳ ಐಸಿಸಿ ಟ್ರೋಫಿಯ ಬರವನ್ನು ಕೊನೆಗೊಳಿಸಿದೆ. ಭಾರತ ಈ ಹಿಂದೆ 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು.ಪ್ರಧಾನಿ ಮೋದಿ ತಂಡವನ್ನು ಅಭಿನಂದಿದ್ದಾರೆ.ಆದರೆ ಗೆಲುವಿನ ಖುಷಿಯಲ್ಲಿಲ್ಲಿರುವಾಗಲೇ ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಕಹಿ ಸುದ್ದಿಯನ್ನು ವಿರಾಟ್ ಕೊಹ್ಲಿ ನೀಡಿದ್ದಾರೆ.

- Advertisement -

ಭಾರತ ತಂಡ T20 ವಿಶ್ವಕಪ್ 2024 ಗೆದ್ದ ಸಂಭ್ರಮದಲ್ಲಿರುವಾಗಲೇ, ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೊಹ್ಲಿ ತಮ್ಮ ನಿವೃತ್ತಿಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.ಸರಣಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಕೊಹ್ಲಿ ಫೈನಲ್ ಪಂದ್ಯದಲ್ಲಿ ಅಮೋಘ ಆಟವಾಡಿ 76(59 ಎಸೆತ) ರನ್ ಗಳಿಸಿದ್ದರು.

Join Whatsapp