ವಿಶಾಖಪಟ್ಟಣ ಏಕದಿನ ಪಂದ್ಯ: ಆಸ್ಪ್ರೇಲಿಯಾದೆದುರು ಭಾರತಕ್ಕೆ ಹೀನಾಯ ಸೋಲು

Prasthutha|

ವಿಶಾಖಪಟ್ಟಣ: ಇಲ್ಲಿ ನಡೆದ ಆಸ್ಪ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಹೀನಾಯ ಸೋಲನುಭವಿಸಿದೆ.
ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಸಂಪೂರ್ಣ ವೈಫಲ್ಯ ಕಂಡ ಭಾರತ ತಂಡ, ಎದುರಾಳಿ ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಸರಣಿಯ ಎರಡನೇ ಪಂದ್ಯದಲ್ಲಿ 10 ವಿಕೆಟ್ ಹೀನಾಯ ಸೋಲನುಭವಿಸಿದೆ.
ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಇತ್ತಂಡಗಳು 1-1 ಸಮಬಲದ ಸಾಧನೆ ಮಾಡಿವೆ.
ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಮ್’ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 26 ಓವರ್ಗಳಲ್ಲಿ 117 ರನ್’ಗೆ ಆಲೌಟ್ ಆಯಿತು.
ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟರ್’ಗಳಾದ ಮಿಚೆಲ್ ಮಾರ್ಷ್ ಅವರ ಅಜೇಯ 66 ಹಾಗೂ ಟ್ರಾವಿಡ್ ಹೆಡ್ ಅವರ ಅಜೇಯ 51 ರನ್ ಗಳೊಂದಿಗೆ 11 ಓವರ್’ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 121 ರನ್ ಬಾರಿಸಿ ವಿಜಯ ಪತಾಕೆ ಹಾರಿಸಿತು.

- Advertisement -