ಮುಖ್ಯಮಂತ್ರಿ ಬಿಎಸ್ ಯಡೀಯೂರಪ್ಪ ಬದಲಾವಣೆಯಾಗಲಿ : ಹೆಚ್ ವಿಶ್ವನಾಥ್ ಬಾಂಬ್

Prasthutha: June 17, 2021

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಗೆ ಮೊದಲಿದ್ದ ಉತ್ಸಾಹ, ಶಕ್ತಿ, ಆರೋಗ್ಯ ಸರಿಯಿಲ್ಲದ ಕಾರಣ ವರಿಷ್ಠರು ಅವರ ನಾಯಕತ್ವವನ್ನು ಬದಲಾಯಿಸಿ ಬೇರೊಬ್ಬರಿಗೆ ನೀಡಲಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಬದಲಾಯಿಸುವಂತೆ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿ ಪಕ್ಷದ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಅವರಿಗೆ ಪಕ್ಷವನ್ನು ಸಂಘಟಿಸಿ ಅಕಾರಕ್ಕೆ ತರಬೇಕೆಂಬ ಉತ್ಸಾಹ, ಶಕ್ತಿ ಇತ್ತು. ಈಗ ಅವರಿಗೆ ವಯಸ್ಸಾಗಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಿ ಬೇರೊಬ್ಬರಿಗೆ ನೀಡಲಿ ಎಂದು ಆಗ್ರಹಿಸಿದರು.

ಸಾಮಾನ್ಯ ಜ್ಞಾನ ಇರುವವರು ರಾಜ್ಯದ ಮುಖ್ಯಮಂತ್ರಿಯಾಗಲಿ. ರಾಜ್ಯದ ಹಿತದೃಷ್ಟಿಯಿಂದ ಯಡಿಯೂರಪ್ಪ ಕುರ್ಚಿ ಬಿಟ್ಟರೆ ಒಳ್ಳೆಯರು. ಆಡಳಿತ ನಡೆಸಲು ಸಾಧ್ಯವಿಲ್ಲದಿದ್ದಾಗ ಮುಂದುವರೆಯುವುದು ಸರಿಯಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಬೇಕೆಂದು ಹಲವರ ಒತ್ತಾಸೆಯಾಗಿದೆ. ಕೆಲವರು ನೇರವಾಗಿ ಹೇಳದಿದ್ದರೂ ಪರೋಕ್ಷವಾಗಿ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಬಿಎಸ್‍ವೈ ಅಧಿಕಾರದಿಂದ ಕೆಳಗಿಳಿದರೆ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದವರೇ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!