ವಿಧಾನ ಪರಿಷತ್ ಸದಸ್ಯ ರಘ ಆಚಾರ್’ಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಲು ವಿಶ್ವಕರ್ಮ ಪರಿಷತ್ ಆಗ್ರಹ

Prasthutha|

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಜಿ. ರಘು ಆಚಾರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಕರ್ನಾಟಕ ವಿಶ್ವಕರ್ಮ ಸಂಘ ಆಗ್ರಹಿಸಿದೆ.

- Advertisement -


ವಿಶ್ವಕರ್ಮ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಸತ್ಯವತಿ ಮಾತನಾಡಿ, ರಘು ಆಚಾರ್ ಅವರು ಚಿತ್ರದುರ್ಗ-ದಾವಣಗೆರೆ ಸ್ಥಳೀಯ ಸಂಸ್ಥೆಗಳಿಂದ ಸತತ ಎರಡು ಬಾರಿ ಎಂಎಲ್’ಸಿಯಾಗಿ ಆಯ್ಕೆಯಾಗಿ ಜನರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಅಡಿಪಾಯ ಹಾಕಿದ್ದಾರೆ ಮತ್ತು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಲ್ಲಾ ಸಮುದಾಯದ ಸದಸ್ಯರೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದ್ದಾರೆ. ಮತದಾರರು ರಘು ಆಚಾರ್ ಅವರಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ ಎಂದು ತಿಳಿಸಿದರು.
ಅಖಿಲ ಭಾರತ ವಿಶ್ವಕರ್ಮ ಪರಿಷತ್ ನ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಹಿಂದುಳಿದ ಸಮುದಾಯವೆಂದು ಪರಿಗಣಿಸಲಾದ ವಿಶ್ವಕರ್ಮ ಸಮುದಾಯವು ಕರ್ನಾಟಕ ರಾಜ್ಯದಲ್ಲಿ ನಲವತ್ತು ಲಕ್ಷ ಜನಸಂಖ್ಯೆಯನ್ನು ಹೊಂದಿದೆ. ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಯನ್ನು ನಿರ್ಧರಿಸುವಲ್ಲಿ ಸಮುದಾಯವು ಪ್ರಮುಖ ಪಾತ್ರ ವಹಿಸುತ್ತದೆ. ಕಾಂಗ್ರೆಸ್ ಪಕ್ಷವು ಎಲ್ಲಾ ಜಾತಿ ಮತ್ತು ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ನೀಡಲು ಹೆಸರುವಾಸಿಯಾಗಿದೆ. ಕಾಂಗ್ರೆಸ್ ಪಕ್ಷವು ರಘು ಆಚಾರ್ ಅವರಿಗೆ ಟಿಕೆಟ್ ನೀಡಿದರೆ, ಅದು ಅವರ ಸಾಮಾಜಿಕ ನ್ಯಾಯದ ಬದ್ಧತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿದರು.


ಕೆಪಿಸಿಸಿ ಸದಸ್ಯ ಇನಂದಾರ್ ಮಾತನಾಡಿ, ರಘು ಆಚಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರು ಮತ್ತು ಕರ್ನಾಟಕದ ಏಕೈಕ ವಿಶ್ವಕರ್ಮ ಸಮುದಾಯದ ಅಭ್ಯರ್ಥಿ. ಅವರಿಗೆ ಟಿಕೆಟ್ ನೀಡಿದರೆ, ಕರ್ನಾಟಕದಾದ್ಯಂತ ವಿಶ್ವಕರ್ಮ ಸಮುದಾಯದವರು ಖಂಡಿತವಾಗಿಯೂ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿದ್ದಾರೆ.
ನಿಮ್ಮ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ವಿಶ್ವಕರ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಿದೆ ಎಂಬ ಸಂಪೂರ್ಣ ವಿಶ್ವಾಸ ನಮಗಿದೆ. ಈ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದಲ್ಲಿ ಪಕ್ಷಕ್ಕೆ ಬಹಿಷ್ಕಾರ ಹಾಕಬಹುದು ಎಂದು ಎಚ್ಚರಿಕೆ ನೀಡಿದರು.

- Advertisement -


ರಘು ಆಚಾರ್ ಅವರಿಗೆ ಟಿಕೆಟ್ ನೀಡುವ ಮೂಲಕ ಕರ್ನಾಟಕದಲ್ಲಿ ವಿಶ್ವಕರ್ಮ ಸಮುದಾಯದವರ ಮೌಲ್ಯವನ್ನು ಗುರುತಿಸಿ ನಿಮ್ಮ ಮಾತಿಗೆ ಬದ್ಧರಾಗುವಿತಿ ಎಂಬ ನಂಬಿಕೆ ಇದೆ. ಆದ್ದರಿಂದ ಕರ್ನಾಟಕದಲ್ಲಿ ವಿಶ್ವಕರ್ಮ ಸಮುದಾಯದವರ ಮಹತ್ವವನ್ನು ಅರಿತು ರಘು ಆಚಾರ್ ಅವರಿಗೆ ಕಾಂಗ್ರೆಸ್ ಚಿತ್ರದುರ್ಗದ ವಿಧಾನಸಭಾ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು.

Join Whatsapp