ಕಲಬುರಗಿ: ಬಾತ್ ರೂಮ್ ನಲ್ಲಿದ್ದ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್ ಎಂಬಾತನನ್ನು ಜನರು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.
ಈ ಘಟನೆ ನಗರದ ರಾಮ ಮಂದಿರ ವೃತ್ತದ ಬಳಿಯಿರುವ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.
ಅಪಾರ್ಟ್ ಮೆಂಟ್ ನಲ್ಲಿ ಬಾಡಿಗೆಯಿದ್ದ ಮಹಿಳೆಯ ವಿಡಿಯೋವನ್ನು ಸೆಕ್ಯುರಿಟಿ ಗಾರ್ಡ್ ರೆಕಾರ್ಡ್ ವಿಶ್ವನಾಥ್ ಎಂಬಾತ ಮಾಡುತ್ತಿರುವುದನ್ನು ಗಮನಿಸಿದ ಮಹಿಳೆ, ತಕ್ಷಣ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅಪಾರ್ಟ್ ಮೆಂಟ್ ಗೆ ಆಗಮಿಸಿದ ಮಹಿಳೆಯ ಗಂಡ ಸೆಕ್ಯುರಿಟಿ ಗಾರ್ಡ್ ನನ್ನು ಹಿಡಿದು ಥಳಿಸಿದ್ದಾರೆ. ಅಪಾರ್ಟ್ ಮೆಂಟ್ ಅಂಡರ್ ಗ್ರೌಂಡ್ ನಲ್ಲಿರುವ ಕಂಬಕ್ಕೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್ ನನ್ನು ಕಟ್ಟಿ ಹಾಕಿ ಅಪಾರ್ಟ್ಮೆಂಟ್ನ ನಿವಾಸಿಗಳು ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.