ಬಂಟ್ವಾಳ: ಕರ್ಣಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಆರೋಪಿಗಳ ಬಂಧಿಸಿದ್ದಾರೆ.
ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಧಿತ ಆರೋಪಿಗಳಾದ ಬಂಟ್ವಾಳ ತಾಲೂಕು ಬಿಮೂಡಾ ಗ್ರಾಮದ ನಿವಾಸಿ ಮಹಮ್ಮದ್ ರಫೀಕ್(35), ಮಂಜೇಶ್ವರ ತಾಲೂಕು ನಿವಾಸಿ ಇಬ್ರಾಹಿಂ ಕೆಲಂದರ್(41) ಮಂಜೇಶ್ವರ ತಾಲೂಕು ಬಾಯಾರು ಗ್ರಾಮದ ಗಾಳಿಯಡ್ಕ ನಿವಾಸಿ ದಯಾನಂದ ಎಸ್ (37), ಎಂದು ಗುರುತಿಸಲಾಗಿದೆ.
ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ.