ವಿಟ್ಲ | ಇಡಿ ಅಧಿಕಾರಿ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆ ದರೋಡೆ ಪ್ರಕರಣ: ಓರ್ವನ ಬಂಧನ

Prasthutha|

ವಿಟ್ಲ : ಬೋಳಂತೂರಿನ ನಾರ್ಶ ಎಂಬಲ್ಲಿ ಉದ್ಯಮಿಯ ಮನೆಗೆ ಈಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ ಕಾರು, ನಗದು ವಶಪಡಿಸಿಕೊಂಡಿದ್ದಾರೆ.

- Advertisement -

ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ (49) ಬಂಧಿತ ಆರೋಪಿ.

ಜ.3 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ ಆರು ಜನ ಅಪರಿಚಿತರು ಇಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಿಸಿಕೊಂಡು, ಮಾನ್ಯ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.

- Advertisement -


ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ ದರೋಡೆಗೆ ಬಳಸಿದ KL-02-BP-1104ನೇ ನೊಂದಣಿ ನಂಬ್ರದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್ ಅನ್ನು ವಶಪಡಿಸಿಕೊಂಡಿದ್ದಾರೆ.



Join Whatsapp