ವಿಟ್ಲ| ಬಾಲಕಿಗೆ ಬೈಕ್ ಡಿಕ್ಕಿ; ಗಂಭೀರ ಗಾಯ

Prasthutha|

ವಿಟ್ಲ: ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಬಳಿ ನಡೆದಿದೆ.

- Advertisement -


ವಿಟ್ಲ ಒಕ್ಕೆತ್ತೂರು ಬಶೀರ್ ಎಂಬವರ ಪುತ್ರಿ ಫಾತಿಮತ್ ನಿಧಾ ಗಾಯಗೊಂಡ ಬಾಲಕಿ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ.
ಶಾಲೆಗೆ ತರಳಲು ರಸ್ತೆ ಬದಿ ನಿಂತಿದ್ದಾಗ ಅತೀವೇಗವಾಗಿ ಬಂದ ಬೈಕ್ ಬಾಲಕಿಗೆ ಡಿಕ್ಕಿ ಹೊಡೆದಿದೆ.


ತಕ್ಷಣವೇ ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

Join Whatsapp