ವಿಟ್ಲ: ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Prasthutha|

ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ದೌರ್ಜನ್ಯ ಎಸೆಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವಿನಲ್ಲಿ ನಡೆದಿದೆ.

- Advertisement -


ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೇವಲ ಒಂದು ವಾರದಲ್ಲಿ ಆರೋಪಿಗೆ ಜಾಮೀನು ಮಂಜೂರಾಗಿತ್ತು.

- Advertisement -


ಇದೀಗ ಆರೋಪಿ ಅಶ್ರಫ್ ನ ಗೂಡಂಗಡಿಗೆ ಯಾರೋ ಕಿಡಿಗೇಡಿಗಳು ಶುಕ್ರವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.



Join Whatsapp