Home ಟಾಪ್ ಸುದ್ದಿಗಳು ವಿಟ್ಲ | ಕುಸಿದು ಬಿದ್ದ ಕೋಳಿ ಶೆಡ್: 1500ಕ್ಕೂ ಅಧಿಕ ಕೋಳಿ ಸಾವು

ವಿಟ್ಲ | ಕುಸಿದು ಬಿದ್ದ ಕೋಳಿ ಶೆಡ್: 1500ಕ್ಕೂ ಅಧಿಕ ಕೋಳಿ ಸಾವು

ವಿಟ್ಲ: ಕೋಳಿ ಸಾಕಾಣೆ ಮಾಡುವ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ನಡೆದಿದೆ.


ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವರವರ ಮಾಲಕತ್ವದ ಶೆಡ್ ಇದಾಗಿದ್ದು, ಸುಮಾರು 2200 ಕೋಳಿಗಳನ್ನು ಅವರು ಸಾಕಾಣೆ ಮಾಡುತ್ತಿದ್ದರು.


ಶೆಡ್ಡಿನ ಮೇಲ್ಚಾವಣಿ ಒಮ್ಮೆಲೆ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಸುಮಾರು 1500 ಕೋಳಿಗಳು ಅದರಡಿಗೆ ಬಿದ್ದು ಸತ್ತುಹೋಗಿವೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.

Join Whatsapp
Exit mobile version