ವಿಟ್ಲ: ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ.
ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರಲ್ಲಿ ಓರ್ವ ಗಂಭೀರವಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಇವರಿಬ್ಬರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.