ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

Prasthutha|

ವಿಟ್ಲ: ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

- Advertisement -

ಕೇರಳದ ಕಣ್ಣೂರು ಕೆಳಕೆ ವಿಟ್ಟಿಲ್ ತಂಬಾಯಿ ಟಿ.ವಿ ಕುಂಞಮಂಗಲ ಪಾಣಚೇರಿ ಪಯ್ಯನ್ನೂರು ನಿವಾಸಿ ಸುಜಾತಾ(42) ಬಂಧಿತ ಆರೋಪಿಯಾಗಿದ್ದಾರೆ.


ಸುಜಾತಾ ಸುಮಾರು 5 ವಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದು, ಫೆ.8ರಂದು ರಾತ್ರಿ 2-30 ಗಂಟೆಗೆ ಕೇರಳ ರಾಜ್ಯದ ಕೋಝಿಕೊಡ್ ಅಂತಾರಾಷ್ಟೀಯ ವಿಮಾನ ನಿಲ್ದಾಣಕ್ಕೆ ಆರೋಪಿ ಸುಜಾತಾ ವಿದೇಶದಿಂದ ಬಂದು ಇಳಿದಿದ್ದಾರೆ. ಈ ವೇಳೆ ಇಮಿಗ್ರೇಷನ್ ಅಧಿಕಾರಿಯವರು ಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

Join Whatsapp