ತನ್ನನ್ನು ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಸ್ವಯಂ ಘೋಷಿಸಿದ ಶಶಿಕಲಾ!

Prasthutha|

ಚೆನ್ನೈ: ಶಶಿಕಲಾ ತಾನು ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ಎಂದು ಸ್ವಯಂ ಘೋಷಿಸಿಕೊಂಡಿದ್ದಾರೆ.
ಅಣ್ಣಾ ಡಿಎಂಕೆ ಪಕ್ಷದ ಸುವರ್ಣ ಮಹೋತ್ಸವಕ್ಕೆ ಸಂಬಂಧಿಸಿದಂತೆ ಟಿ ನಗರದ ಎಂಜಿಆರ್ ಸ್ಮಾರಕದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಶಶಿಕಲಾ ಅವರು ‘ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ‘ ಎಂಬ ಫಲಕವನ್ನು ಅನಾವರಣಗೊಳಿಸಿದ್ದಾರೆ.

- Advertisement -

ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಪಕ್ಷದ ಧ್ವಜಾರೋಹಣ ಮಾಡಿ ಮಾತನಾಡಿದ ಶಶಿಕಲಾ, ಪಕ್ಷ ಮತ್ತು ಜನರ ಹಿತಕ್ಕಾಗಿ ಎಲ್ಲರೂ ಒಗ್ಗೂಡುವ ಸಮಯ ಇದಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾ ಡಿಎಂಕೆ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಪಕ್ಷದ ಕಾರ್ಯಕರ್ತರಿಗೆ ಸಿಹಿ ಹಂಚಿದ ಅವರು, ರಾಮಾಪುರದ ಎಂಜಿಆರ್ ಮನೆಗೆ ಭೇಟಿ ನೀಡಿದ್ದಾರೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಅಣ್ಣಾ ಡಿಎಂಕೆ ನಾಯಕತ್ವ, ಫಲಕದಲ್ಲಿ ಹೆಸರು ಬರೆಯುವುದರಿಂದ ಯಾರೂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

- Advertisement -

ಪ್ರಧಾನ ಕಾರ್ಯದರ್ಶಿ ಹುದ್ದೆಯ ದುರುಪಯೋಗ ಮತ್ತು ಪಕ್ಷದ ಧ್ವಜವನ್ನು ಕಾರಿನಲ್ಲಿ ಇರಿಸಿದ ಶಶಿಕಲಾ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಅಣ್ಣಾ ಡಿಎಂಕೆ ನಾಯಕ ಡಿ ಜಯಕುಮಾರ್ ಹೇಳಿದರು.

ಜಯಲಲಿತಾ ಸಾವಿನ ನಂತರ ಶಶಿಕಲಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಆದರೆ ಅಕ್ರಮ ಆಸ್ತಿ ಸಂಪಾದನೆಗಾಗಿ ಜೈಲು ಸೇರಿದಾಗ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದರ ವಿರುದ್ಧ ಶಶಿಕಲಾ ಮದ್ರಾಸ್ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.

Join Whatsapp
Exit mobile version