ವಾಯ್ಸ್ ಆಫ್ ಬ್ಲಡ್ ಡೋನರ್ಸ್, ಲಯನ್ಸ್ ಕ್ಲಬ್, ಸೆಂಚುರಿಯನ್, ಗ್ರೂಪ್ ಆಫ್ ತಾಜ್ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ

Prasthutha: March 18, 2021

ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಲಯನ್ಸ್ ಕ್ಲಬ್ ಮಂಗಳೂರು ಸೆಂಚುರಿಯನ್ ಹಾಗೂ ಗ್ರೂಪ್ ಆಫ್ ತಾಜ್ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಮಂಗಳೂರಿನ ರಾವ್ & ರಾವ್ ಸರ್ಕಲ್‌ನ ಸಿಟಿ ಟವರ್‌ನಲ್ಲಿ ಬುಧವಾರ ಆಯೋಜಿಸಲಾದ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವನ್ನು ವೈಪಿಎಲ್ ಅಹ್ಮದ್ ಮೊಹಿದ್ದೀನ್ ಲೆಬ್ಬಾಯಿ ಅಲಿಯಾಸ್ ಹಜ್ರತ್ ಬಿಸ್ಮಿಲ್ಲಾ ಮುತ್ತುಪೆಟ್ಟಾಯಿ ಉದ್ಘಾಟಿಸಿ ದುಆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮೇಯರ್ ಕೆ.ಅಶ್ರಫ್ ಅವರು, ಸಂಸ್ಥೆಯ ಜೀವದಾನದ ಕಾರ್ಯವನ್ನು ಶ್ಲಾಘಿಸಿದರು.

ಲಯನ್ ಗೀತಾ ಆರ್.ಶೆಟ್ಟಿ ಮಾತನಾಡಿ, ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯು ಸುಮಾರು ನಾಲ್ಕು ಸಾವಿರ ಯುನಿಟ್ ಬ್ಲಡ್ ಸಂಗ್ರಹಿಸಿ ನೀಡಿದ್ದಾರೆ. ಈ ಸಂಸ್ಥೆ ಕೇವಲ ರಕ್ತದಾನ ಮಾತ್ರವಲ್ಲ ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕವೂ ಜನಾನುರಾಗಿಯಾಗಿದೆ ಎಂದರು.

ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಮೆಡಿಕಲ್ ಆಫೀಸರ್ ಡಾ|ಜೆ.ಎನ್.ಭಟ್, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ  ಜಲೀಲ್ ಕೃಷ್ಣಾಪುರ, ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ.ಇಮ್ತಿಯಾಜ್, ಗ್ರೂಪ್ ಆಫ್ ತಾಜ್‌ನ ಅಧ್ಯಕ್ಷ ಸಾದಿಕ್, ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮತ್ತು ಸದಸ್ಯರು ಉಪಸ್ಥಿತರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!