ಒಕ್ಕಲಿಗರ ತಂಟೆಗೆ ಬಂದ್ರೆ ತಕ್ಕಪಾಠ: ಸಚಿವ ಮಾಧುಸ್ವಾಮಿಗೆ ಎಚ್ಚರಿಕೆ ಕೊಟ್ಟ ಒಕ್ಕಲಿಗರ ಸಂಘ

Prasthutha|

ತುಮಕೂರು: ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿ ಅವರ ಕುಟುಂಬದವರ ವಿರುದ್ಧ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಮಾಡಿರುವ ಆರೋಪವನ್ನು ತಾಲೂಕು ಒಕ್ಕಲಿಗ ಸಮುದಾಯ ಖಂಡಿಸಿದ್ದು, ಒಕ್ಕಲಿಗರ ತಂಟೆಗೆ ಬಂದರೆ ತಕ್ಕಪಾಠ ಕಲಿಸುವುದಾಗಿ ಎಚ್ಚರಿಸಿದೆ.

- Advertisement -


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಒಕ್ಕಲಿಗ ಸಮುದಾಯದ ಮುಖಂಡರು, ‘ದೇವೇಗೌಡರ ಕುಟುಂಬದ ಬಗ್ಗೆ ಮಾಧುಸ್ವಾಮಿ ಲಘುವಾಗಿ ಮಾತನಾಡುವುದನ್ನು ನಿಲ್ಲಿಸದಿದ್ದರೆ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.


‘ದೇವೇಗೌಡರು ದೇಶದ ಪ್ರಧಾನಿ ಹುದ್ದೆಗೆ ಏರಿ ನಾಡಿಗೆ ಅನೇಕ ಕೊಡುಗೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು’ ಎಂದು ತಾಲ್ಲೂಕು ಒಕ್ಕಲಿಗ ಸಮಾಜದ ಅಧ್ಯಕ್ಷ ಹರ್ಷ ಎಚ್ಚರಿಕೆ ನೀಡಿದರು.

- Advertisement -


ದೇವೇಗೌಡರ ಕುಟುಂಬದಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳು ಲೂಟಿ ಹೊಡೆಯುತ್ತಿದ್ದಾರೆ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆ ವಿಚಾರದ ಬಗ್ಗೆ ದೇವೇಗೌಡರು ಕಂಟ್ರಾಕ್ಟರ್ ಆಗಿ ಕೆಲಸ ಶುರುಮಾಡಿದಾಗ, ಮಾಧುಸ್ವಾಮಿಗೆ ಚಡ್ಡಿ ಹಾಕೋಕೆ ಬರುತ್ತಿರಲಿಲ್ಲ, ಇವತ್ತು ದೇವೇಗೌಡರ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆಂದು ಹೇಳಿದ್ದಾರೆ.



Join Whatsapp