ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ: 2B ಮೀಸಲಾತಿ ಹಂಚಿಕೆ ಕುರಿತು ನಂಜಾವಧೂತ ಸ್ವಾಮೀಜಿ ಅಸಮಾಧಾನ

Prasthutha|

ಬೆಂಗಳೂರು: 2ಬಿ ವರ್ಗದ ಮೂಲಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ತೆಗೆದುಹಾಕಿ, ಅದನ್ನು ಲಿಂಗಾಯತ ಮತ್ತು ಒಕ್ಕಲಿಗರಿಗೆ ತಲಾ 2 ಪರ್ಸೆಂಟ್ ಹಂಚಿರುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದು, ಒಕ್ಕಲಿಗರು ಬೇರೆಯವರ ಅನ್ನ ಕಿತ್ತು ತಿನ್ನುವುದಿಲ್ಲ ಎಂದು ಹೇಳಿದ್ದಾರೆ.

- Advertisement -


ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ಒಕ್ಕಲಿಗರಿಗೆ ಶೇ.4 ರಿಂದ ಶೇ.6ಕ್ಕೆ ಮೀಸಲಾತಿ ಏರಿಕೆ ಮಾಡಿರುವ ಸಂಬಂಧ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ಮೀಸಲಾತಿ ಕಿತ್ತು ಶೇ.2 ಮೀಸಲಾತಿ ಹೆಚ್ಚಿಸಿದ್ದಾರೆ. ಬಕಾಸುರನ ಹೊಟ್ಟೆಗೆ ಅರೆಪಾವು ಮಜ್ಜಿಗೆ ಕೊಟ್ಟಂತಾಗಿದೆ. ಒಕ್ಕಲಿಗರು ಬೇರೆಯವರ ಅನ್ನವನ್ನ ಕಿತ್ತು ತಿನ್ನುವವರಲ್ಲ” ಎಂದಿರುವ ಅವರು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

Join Whatsapp