ಬೆಂಗಳೂರು: ಸೈನಿಕರ ಅಲ್ಪಾವಧಿ ನೇಮಕಾತಿಗೆ ಜಾರಿಗೆ ತರಲು ಉದ್ದೇಶಿಸಿರುವ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು. ಖಾಸಗೀಕರಣ ಬಲಿಷ್ಠ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಯೋಜನೆಗೆ ಮುಂದಾಗಿದೆ.
ಯುವಕರಿಗೆ ಉದ್ಯೋಗ ನೀಡುವ ಬದಲು ನಿರುದ್ಯೋಗ ಹೆಚ್ಚಿಸುವ ಕೆಲಸವು ಮೋದಿ ನೇತೃತ್ವದ ಬಿಜೆಪಿ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಆರೋಪಿಸಿದ್ದಾರೆ.
ಅಗ್ನಿಪಥ ಪ್ರಕ್ರಿಯೆಯಲ್ಲಿ ಮೀಸಲಾತಿ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ. ಅಗ್ನಿಪಥ ಯೋಜನೆ ಅನುಷ್ಠಾನದಿಂದ ಯುವಕರಿಗೆ ಅನ್ಯಾಯವಾಗುತ್ತದೆ. ರಕ್ಷಣಾ ಇಲಾಖೆಯನ್ನು ಖಾಸಗೀಕರಣದ ಹೆಸರಲ್ಲಿ ಕೇಸರೀಕರಣ ಮಾಡುವ ಕೆಲಸಕ್ಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೈ ಹಾಕಿದೆ ಎಂದು ಟೀಕಿಸಿದರು.
ರಕ್ಷಣಾ ಇಲಾಖೆಯಲ್ಲಿ 30 ವರ್ಷಗಳ ಕಾಲ ದುಡಿದು ನಿವೃತ್ತಿ ಪಡೆದು ಹೊರ ಬಂದವರಿಗೆ ಯಾವುದೇ ಉದ್ಯೋಗ ನೀಡಿಲ್ಲ. ಸೇನೆಯಿಂದ ನಿವೃತ್ತಿ ಪಡೆದು ಬಂದಿರುವ ಜಿಲ್ಲೆಯ 16 ಸಾವಿರ ಮಂದಿ ಸೈನಿಕರಿಗೆ ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆ ಯಾವುದೇ ಕೆಲಸ ನೀಡಿಲ್ಲ. ನಾಲ್ಕು ವರ್ಷಗಳ ಕಾಲ ಸೈನಿಕರಾಗಿ ಸೇವೆ ಸಲ್ಲಿಸುವ ಎಸ್ಸೆಸ್ಸೆಲ್ಸಿ ಅರ್ಹತೆ ಹೊಂದಿದವರಿಗೆ ಸೈನಿಕರಾಗಿ ದುಡಿಯುವವರಿಗೆ ಪಿಯುಸಿ ಪ್ರಮಾಣ ಪತ್ರ ನೀಡುತ್ತೇವೆ ಎಂದು ಹೇಳಿದ್ದೀರಿ, ಇದು ಸರಿ. ಆದರೆ ಅಗ್ನಿವೀರ ಪ್ರಮಾಣಪತ್ರ ನೀಡುತ್ತೇವೆ ಎಂದು ಹೇಳುತ್ತಿದ್ದೀರಿ ಇದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದರ ಜೋತೆ ಯುವಕರು ಹಿಂಸೆಮಾರ್ಗ ತೊರೆದು ಶಾಂತಿಯುತ ರೀತಿಯಲ್ಲಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದೆ, ಸರ್ಕಾರಿ ಸರಕಾರದ ಆಸ್ತಿಪಾಸ್ತಿಗೆ ಹಾನಿ ಮಾಡಕೂಡುದು ಎಂದು ಅವರು ಯುವಕರಲ್ಲಿ ಮನವಿ ಮಾಡಿದರು.
ರಾಷ್ಟ್ರಾದ್ಯಂತ ಪ್ರತಿಭಟನೆ ಮತ್ತು ಹಿಂಸಾಚಾರ ನಡೆಯುತ್ತಿದ್ದರೂ ಸರಕಾರ ಹಠ ಬಿಡದೆ ಯೋಜನೆ ಜಾರಿ ಮಾಡಲು ಮುಂದಾಗಿರುವುದು ಖಂಡನಿಯ. ಸರಕಾರ ತಕ್ಷಣ ಪ್ರತಿಭಟನಾ ಕರೆದು ಅಹವಾಲು ಕೇಳಿ ಅವರಿಗೆ ಸಮಾಧಾನ ಸಮಾಧಾನಪಡಿಸುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಅಗ್ನಿಪಥ ಹೆಸರಲ್ಲಿ ಕೇಸರೀಕರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ. ಇದರಿಂದ ದೇಶದ ಭದ್ರತೆಗೆ ಧಕ್ಕೆ ಬರಲಿದೆ. ರಕ್ಷಣಾ ಇಲಾಖೆಯಲ್ಲಿ ಖಾಸಗೀಕರಣ ಮಾಡುವ ಕೆಲಸವನ್ನು ಕೂಡಲೇ ಕೈಬಿಡಬೇಕು. ದೇಶದ ಜನರ ದಿಕ್ಕು ತಪ್ಪಿಸುವ ಯೋಜನೆ ಜಾರಿಗೆ ಸರ್ಕಾರ ಮುಂದಾಗಬಾರದು ಎಂದು ತಾಹಿರ್ ಹುಸೇನ್ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.