Home ಟಾಪ್ ಸುದ್ದಿಗಳು ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ.


ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ ಬೇನೆಯಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.


ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಅತ್ಯಧಿಕ ಸಾಧನೆ ತೋರಿದ್ದರು.

Join Whatsapp
Exit mobile version