ಮಡಿಕೇರಿ: ನಾಪೋಕ್ಲುವಿನ ರಾಫೆಲ್ಸ್ ಇಂಟರ್‌ನ್ಯಾಷನಲ್ ಪದವಿ ಪೂರ್ವ ಕಾಲೇಜು ಮೂರ್ನಾಡ್ ಹಾಗೂ ನಾಪೋಕ್ಲು ಕ್ಲಸ್ಟರ್ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಾಲಿಬಾಲ್ ಹಾಗೂ ಥ್ರೋಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಂತಾರಾಷ್ಟೀಯ ಸ್ಟೇಟಿಂಗ್ ಕ್ರೀಡಾಪಟ್ಟು ಜಗದೀಪ್ ಪಳಂಗಪ್ಪ, ಎಲ್ಲಾ ಕ್ರೀಡೆಗಳಿಗೂ ಸಮಾನ ಪ್ರಾಮುಖ್ಯತೆ ನೀಡಿದರೆ ಮಾತ್ರ ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಮೇಲಿನ ಆಸಕ್ತಿ ಹೆಚ್ಚಿಸಲು ಸಾಧ್ಯ. ಭಾರತದಲ್ಲಿ ಕ್ರಿಕೆಟ್‌ಗೆ ನೀಡುವ ಪ್ರಮುಖ್ಯತೆಯನ್ನು ಬೇರೆ ಯಾವುದೇ ಕ್ರೀಡೆಗೆ ನೀಡದಿರುವುದು ವಿಷಾದನೀಯ ಎಂದರು.
ಐಪಿಎಲ್ ನಲ್ಲಿ ಆಡುವ ಕ್ರಿಕೆಟ್ ಆಟಗಾರರನ್ನು ಗುರುತಿಸುವ ಜನರು, ಅಂತಾರಾಷ್ಟೀಯ ಹಾಕಿ ಆಟಗಾರರನ್ನು ಗುರುತ್ತಿಸಲು ವಿಫಲರಾಗುತ್ತಾರೆ. ಕ್ರೀಡೆ ಒಬ್ಬ ವಿದ್ಯಾರ್ಥಿಯ ಮಾನಸಿಕ ಹಾಗೂ ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ, ಆದ್ದರಿಂದ ಪ್ರತೀಯೊಬ್ಬ ವಿದ್ಯಾರ್ಥಿಯು ಯಾವುದಾದರೋಂದು ಕ್ರೀಡೆಯಲ್ಲಿ ತಮ್ಮನ್ನ ತೊಡಗಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಮೆಬಹೂಬ್ ಸಾಬ್, ಪ್ರಾಂಶುಪಾಲರಾದ ತನ್ವೀರ್ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ರೇಖಾ ಕಿಶೋರ್ ಹಾಜರಿದ್ದರು.
ವಾಲಿವಾನ್ ಪಂದ್ಯದಲ್ಲಿ ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು, ಮೂರ್ನಾಡು ಜ್ಞಾನ ಜ್ಯೋಶಿ ಪ್ರೌಢ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡರು. ವಿದ್ಯಾರ್ಥಿನಿಯರ ಥ್ರೋಬಾಲ್ ಪಂದ್ಯಾದಲ್ಲಿ ಎಮ್ಮೆಮಾಡು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಹಾಗೂ ನಾಪೋಕ್ಲು ಶ್ರೀ ರಾಮ ಟ್ರಸ್ಟ್ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನವನ್ನು ಪಡೆದರು.