ಸರ್ವಾಧಿಕಾರದ ವಿರುದ್ಧ ಮತ ಚಲಾಯಿಸಿ: ಮತದಾರರಿಗೆ ಅರವಿಂದ್ ಕೇಜ್ರಿವಾಲ್ ಮನವಿ

Prasthutha|

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ “ಸರ್ವಾಧಿಕಾರದ ವಿರುದ್ಧ ಮತ ಚಲಾಯಿಸುವಂತೆ” ಮತದಾರರನ್ನು ಶನಿವಾರ ಒತ್ತಾಯಿಸಿದ್ದಾರೆ.

- Advertisement -

ಚಾಂದಿನಿ ಚೌಕ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿವಿಲ್ ಲೈನ್ಸ್ ಪ್ರದೇಶದ ಮತಗಟ್ಟೆಯಲ್ಲಿ ಅರವಿಂದ್ ಕೇಜ್ರಿವಾಲ್, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮತ್ತು ಇತರ ಕುಟುಂಬ ಸದಸ್ಯರು ತಮ್ಮ ಮತ ಚಲಾಯಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. “ನಾನು ಇಂದು ನನ್ನ ತಂದೆ, ಹೆಂಡತಿ ಮತ್ತು ಮಕ್ಕಳೊಂದಿಗೆ ಮತ ಚಲಾಯಿಸಿದ್ದೇನೆ. ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರಿಗೆ ಮತದಾನ ಮಾಡಲು ಹೋಗಲಾಗಲಿಲ್ಲ. ನಾನು ಸರ್ವಾಧಿಕಾರ, ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಹಾಕಿದ್ದೇನೆ. ನೀವೂ ಹೋಗಿ ಅದರ ವಿರುದ್ಧ ಮತ ಚಲಾಯಿಸಬೇಕು” ಎಂದು ಮಾಧ್ಯಮದವರ ಜತೆ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

Join Whatsapp
Exit mobile version