‘ಸಂವಿಧಾನದ ಯೋಧ’ ಆಗಿ ಪ್ರಜಾಪ್ರಭುತ್ವದ ರಕ್ಷಣೆಗೆ ಮತ ಹಾಕಿ: ರಾಹುಲ್ ಗಾಂಧಿ

Prasthutha|

ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆಯುವ ಎಲ್ಲ ಕ್ಷೇತ್ರಗಳಲ್ಲಿ ಮತ ಚಲಾಯಿಸುವಂತೆ ಜನರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿನಂತಿ ಮಾಡಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಪ್ರೀತಿಯ ದೇಶದ ನಿವಾಸಿಗಳೇ, ಇಂದು ದೇಶದ ಭವಿಷ್ಯವನ್ನು ನಿರ್ಧರಿಸುವ ಐತಿಹಾಸಿಕ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಮುಂದಿನ ಸರ್ಕಾರ ‘ಕೆಲವು ಬಿಲಿಯನೇರ್’ ಅಥವಾ ‘140 ಕೋಟಿ ಭಾರತೀಯರದ್ದು’ ಎಂಬುದನ್ನು ನಿಮ್ಮ ಮತ ನಿರ್ಧರಿಸುತ್ತದೆ. ಆದ್ದರಿಂದ ಎಲ್ಲರೂ ಮನೆಯಿಂದ ಹೊರಗೆ ಬಂದು ‘ಸಂವಿಧಾನದ ಯೋಧ’ ಆಗುವ ಮೂಲಕ ಪ್ರಜಾಪ್ರಭುತ್ವದ ರಕ್ಷಣೆಗೆ ಮತ ಹಾಕುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ’ ಎಂದು ಹೇಳಿದ್ದಾರೆ.

Join Whatsapp