ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ

Prasthutha|

ಮೈಸೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ್ದಾರೆ.

- Advertisement -


ಅಲ್ಲದೆ ಎಲ್ಲರೂ ತಪ್ಪ ಮತ ಚಲಾಯಿಸಿ, ಭಾರತವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.


‘ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ದ್ವೇಷ ರಾಜಕೀಯಗಳನ್ನು ಕಿತ್ತೆಸೆದು ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಮರುಸ್ಥಾಪನೆ ಮಾಡಲು ನನ್ನ ಹುಟ್ಟೂರಾದ ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯಲ್ಲಿ ಪ್ರಜ್ಞಾವಂತಿಕೆಯಿಂದ ನನ್ನ ಹಕ್ಕಿನ ಮತ ಚಲಾಯಿಸಿದೆ’ ಎಂದು ಅವರು ತಿಳಿಸಿದ್ದಾರೆ.

Join Whatsapp