ಮತದಾರರ ಪಟ್ಟಿ ಅಕ್ರಮ| ಚಿಲುಮೆ ಸಂಸ್ಥೆ ಮೇಲೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ ಪೊಲೀಸರು

Prasthutha|

- Advertisement -

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಆರೋಪದಲ್ಲಿ ಮಲ್ಲೇಶ್ವರಂ ಚಿಲುಮೆ ಸಂಸ್ಥೆಯ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಬಿಬಿಎಂಪಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಸಂಬಂಧ ರೇಣುಕಾಪ್ರಸಾದ್, ಧರ್ಮೇಶ್​, ಸುಧಾಕರ್​ ಮತ್ತು ರಕ್ಷಿತ್ ಎನ್ನುವರನ್ನು ವಶಕ್ಕೆ ಪಡೆದುಕೊಂಡಿದ್ದು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್ ನೀಡಿದ್ದ ಮಹದೇವಪುರ ವಲಯದ ಆರ್ ಒ ಚಂದ್ರಶೇಖರ್ ರನ್ನು ಸಸ್ಪೆಂಡ್ ಮಾಡಲಾಗಿದೆ.

Join Whatsapp