Home ಟಾಪ್ ಸುದ್ದಿಗಳು ಜಮ್ಮು-ಕಾಶ್ಮೀರದಲ್ಲಿ ಅತ್ಯಂತ ಕಡಿಮೆ,ಪಶ್ಚಿಮ ಬಂಗಾಳದಲ್ಲಿ ಅತ್ಯಂತ ಹೆಚ್ಚು ಮತದಾನ: ಅಲ್ಲಲ್ಲಿ ಹಿಂಸಾಚಾರ

ಜಮ್ಮು-ಕಾಶ್ಮೀರದಲ್ಲಿ ಅತ್ಯಂತ ಕಡಿಮೆ,ಪಶ್ಚಿಮ ಬಂಗಾಳದಲ್ಲಿ ಅತ್ಯಂತ ಹೆಚ್ಚು ಮತದಾನ: ಅಲ್ಲಲ್ಲಿ ಹಿಂಸಾಚಾರ

ನವದೆಹಲಿ‌: ದೇಶದ ನಾಲ್ಕನೆಯ ಹಂತದ ಲೋಕಸಭಾ ಚುನಾವಣೆಯಲ್ಲಿ ಶೇಖಡಾ 62.84ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಮತದಾನವಾದರೆ, ಪಶ್ಚಿಮ ಬಂಗಾಳದಲ್ಲಿ ಅತ್ಯಂತ ಹೆಚ್ಚು ಪ್ರಮಾಣದ ಮತದಾನ ಆಗಿದೆ.

ಆಂಧ್ರಪ್ರದೇಶದ ಪಲ್ನಾಡು, ಕಡಪ ಮತ್ತು ಅನ್ನಮಯ್ಯ ಜಿಲ್ಲೆಗಳಲ್ಲಿ ಹಿಂಸಾಚಾರ ವರದಿಯಾಗಿದೆ. ಪಶ್ಚಿಮ ಬಂಗಾಳದಲ್ಲಿಯೂ ಹಿಂಸಾಚಾರ ನಡೆದಿದೆ. ಬರ್ಧಮಾನ್-ದುರ್ಗಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿಲೀಪ್ ಘೋಷ್ ಅವರ ವಾಹನಗಳ ಮೇಲೆ ಎರಡು ಕಡೆಗಳಲ್ಲಿ ಕಲ್ಲು ತೂರಲಾಗಿದೆ.

ಉತ್ತರ ಪ್ರದೇಶದಲ್ಲಿ ಹಲವೆಡೆ ಜನರು ಮತದಾನಕ್ಕೆ ಬಹಿಷ್ಕಾರ ಹಾಕಿದ್ದರು. ಶಹಜಹಾನಪುರದ ಕೆಲವು ಹಳ್ಳಿಗಳ ಜನರು ರಸ್ತೆ ಸೌಲಭ್ಯ ಸರಿಯಿಲ್ಲ, ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ದೂರಿ ಮತದಾನದಿಂದ ದೂರ ಉಳಿದಿದ್ದಾರೆ.

ಇವಿಎಂ ಸರಿಯಾಗಿ ಕೆಲಸ ಮಾಡಿಲ್ಲ ಎಂದು, ಏಜೆಂಟರಿಗೆ ಮತಗಟ್ಟೆ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ಒಟ್ಟು 1,088 ದೂರುಗಳು ವಿವಿಧ ಪಕ್ಷಗಳಿಂದ ಚುನಾವಣಾ ಆಯೋಗಕ್ಕೆ ಸಲ್ಲಿಕೆಯಾಗಿವೆ.

Join Whatsapp
Exit mobile version