6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭ

Prasthutha|

ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ.

- Advertisement -


ಆರು ರಾಜ್ಯಗಳ ವಿಧಾನಸಭಾ ಉಪಚುನಾವಣೆಗಳಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್), ರಾಷ್ಟ್ರೀಯ ಜನತಾ ದಳ (ಆರ್ ಜೆಡಿ), ಸಮಾಜವಾದಿ ಪಕ್ಷ (ಎಸ್ ಪಿ) ಮತ್ತು ಬಿಜು ಜನತಾದಳ (ಬಿಜೆಡಿ) ನಂತಹ ಪ್ರಾದೇಶಿಕ ಪಕ್ಷಗಳೊಂದಿಗೆ ಭಾರತೀಯ ಜನತಾ ಪಕ್ಷವು ತೀವ್ರ ಪೈಪೋಟಿಯಲ್ಲಿದೆ.


ಮಹಾರಾಷ್ಟ್ರ, ಹರಿಯಾಣ, ಬಿಹಾರ, ತೆಲಂಗಾಣ, ಒಡಿಶಾ ಮತ್ತು ಉತ್ತರ ಪ್ರದೇಶ ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಗಿ ಭದ್ರತೆಯ ನಡುವೆ ಮತದಾನ ಆರಂಭವಾಗಿದ್ದು, ನವೆಂಬರ್ 6 ರಂದು ಮತ ಎಣಿಕೆ ನಡೆಯಲಿದೆ.

- Advertisement -


ಉಪಚುನಾವಣೆ ನಡೆಯುತ್ತಿರುವ ಏಳು ಸ್ಥಾನಗಳಲ್ಲಿ ಕಳೆದ ಬಾರಿ ಬಿಜೆಪಿ ಮೂರು, ಕಾಂಗ್ರೆಸ್ ಎರಡು, ಶಿವಸೇನಾ ಮತ್ತು ಆರ್ಜೆಡಿ ತಲಾ ಒಂದು ಸ್ಥಾನಗಳಲ್ಲಿ ಗೆಲುವು ದಾಖಲಿಸಿತ್ತು.

Join Whatsapp