ತಮಿಳುನಾಡಿನ ಎಲ್ಲಾ 39 ಸ್ಥಾನ ಸೇರಿ 102 ಕ್ಷೇತ್ರಗಳಿಗೆ ಇಂದು ಮತದಾನ

Prasthutha|

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

- Advertisement -

ತಮಿಳುನಾಡಿನ ಎಲ್ಲಾ 39 ಸ್ಥಾನಗಳು, ಉತ್ತರಾಖಂಡದ ಎಲ್ಲಾ ಐದು ಸ್ಥಾನಗಳು, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯದ ಎರಡೂ ಸ್ಥಾನಗಳು ಮತ್ತು ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂನ ತಲಾ ಒಂದು ಸ್ಥಾನಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಮತದಾನ ಪ್ರಕ್ರಿಯೆಗಳಿಗೆ ದೇಶದ 102 ಕ್ಷೇತ್ರಗಳು ಸಜ್ಜಾಗಿವೆ. 1,600ಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ನಿರ್ಣಯವಾಗಲಿದೆ. 16.63 ಕೋಟಿಗೂ ಹೆಚ್ಚು ಮಂದಿ ಮತದಾನದ ಅರ್ಹತೆ ಪಡೆದಿದ್ದಾರೆ.

- Advertisement -

ಇಂದು ಮತ ಪಡೆಯುವವರಲ್ಲಿ ನಿತಿನ್‌ ಗಡ್ಕರಿ, ಜಿತೇಂದ್ರ ಸಿಂಗ್‌ ಥೋಮರ್‌ ಸೇರಿದಂತೆ 8 ಜನ ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ರಾಜ್ಯಪಾಲೆ ಕೂಡ ಇದ್ದಾರೆ.

ರಾಜಸ್ಥಾನದ 25 ರಲ್ಲಿ 12, ಉತ್ತರ ಪ್ರದೇಶದ 80 ರಲ್ಲಿ 8, ಮಧ್ಯಪ್ರದೇಶದ 29 ರಲ್ಲಿ 6, ಮಹಾರಾಷ್ಟ್ರದ 48 ರಲ್ಲಿ 5, ಅಸ್ಸಾಂನ 14 ರಲ್ಲಿ 5 ಮತ್ತು ಬಿಹಾರದ 40 ಸ್ಥಾನಗಳ ಪೈಕಿ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಲ್ಲದೇ ಪಶ್ಚಿಮ ಬಂಗಾಳದ 42 ಸ್ಥಾನಗಳ ಪೈಕಿ ಮೂರು, ಛತ್ತೀಸ್‌ಗಢದ 11 ಸ್ಥಾನಗಳಲ್ಲಿ ಒಂದು ಮತ್ತು ತ್ರಿಪುರಾದಲ್ಲಿ ಎರಡು ಸ್ಥಾನಗಳ ಪೈಕಿ ಒಂದಕ್ಕೆ ಚುನಾವಣೆ ನಡೆಯಲಿದೆ.

ಕೇಂದ್ರಾಡಳಿತ ಪ್ರದೇಶಗಳಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಐದರಲ್ಲಿ ಒಂದು ಸ್ಥಾನ, ಹಾಗೆಯೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿನ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಶುಕ್ರವಾರ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ 92 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಕೊಯಮತ್ತೂರು ಕ್ಷೇತ್ರದಿಂದ ಕಣದಲ್ಲಿದ್ದು, ಇಂದು ಭವಿಷ್ಯ ನಿರ್ಧಾರವಾಗಲಿದೆ.ಅಣ್ಣಾ ಮಲೈ ವಿರುದ್ಧ ಡಿಎಂಕೆ ನಾಯಕ ಗಣಪತಿ ಪಿ. ರಾಜಕುಮಾರ್ ಹಾಗೂ ಎಡಿಎಂಕೆ ಸಂಸದ ಸಿಂಗಾಯ್ ರಾಮಚಂದ್ರನ್ ಸ್ಪರ್ಧಿಸುತ್ತಿದ್ದಾರೆ.

ಇಂದು ಮತದಾನ ನಡೆವ 102 ಲೋಕಸಭಾ ಸ್ಥಾನಗಳಲ್ಲಿ 2019ರಲ್ಲಿ ಬಿಜೆಪಿ 39 ಸ್ಥಾನಗಳನ್ನು ಗೆದ್ದಿತ್ತು, ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟವು 39 ಸ್ಥಾನಗಳಲ್ಲಿ 38 ಸ್ಥಾನಗಳನ್ನೂ ಗೆದ್ದಿತ್ತು.

543 ಲೋಕಸಭಾ ಸ್ಥಾನಗಳಿಗೆ ಇಂದಿನಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Join Whatsapp