ಖ್ಯಾತ ನಟಿ ವಹೀದಾ ರೆಹಮಾನ್’ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

Prasthutha|

ನವದೆಹಲಿ: ಭಾರತೀಯ ಚಿತ್ರರಂಗದ ಜನಪ್ರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

- Advertisement -


ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಭಾರತ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಹಿರಿಯ ನಟಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಬಣ್ಣದ ಲೋಕದಲ್ಲಿ 5 ದಶಕಗಳ ಕಾಲ ಸಕ್ರಿಯವಾಗಿದ್ದ ವಹೀದಾ ರೆಹಮಾನ್ ಅವರು 90ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹೆಚ್ಚಾಗಿ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಅವರು ತೆಲುಗು, ಮಲಯಾಳಂ, ತಮಿಳು, ಬೆಂಗಾಲಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.

Join Whatsapp