Home ಟಾಪ್ ಸುದ್ದಿಗಳು ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ: ಮಮತಾ ಬ್ಯಾನರ್ಜಿ

ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.

ಹೊಸದಾಗಿ ಆಯ್ಕೆಯಾದ ಟಿಎಂಸಿ ಸಂಸದರ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇಂಡಿಯಾ’ ಬಣವು ಸರ್ಕಾರ ರಚಿಸುವ ಹಕ್ಕನ್ನು ಪಡೆದಿಲ್ಲ. ಆದರೆ ಮತ್ತೆ ಪ್ರಯತ್ನಿಸುವುದಿಲ್ಲ ಎಂದು ಅರ್ಥವಲ್ಲ. ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ ಎಂದಿದ್ದಾರೆ.

ದೇಶಕ್ಕೆ ಬದಲಾವಣೆ ಬೇಕು; ದೇಶ ಬದಲಾವಣೆ ಬಯಸುತ್ತಿದೆ. ಈ ಜನಾದೇಶ ಬದಲಾವಣೆಗಾಗಿತ್ತು. ನಾವು ಕಾಯುತ್ತಿದ್ದೇವೆ ಮತ್ತು ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದೇವೆ. ಈ ಜನಾದೇಶ ನರೇಂದ್ರ ಮೋದಿ ವಿರುದ್ಧವಾಗಿದೆ. ಆದ್ದರಿಂದ ಅವರು ಈ ಬಾರಿ ಪ್ರಧಾನಿಯಾಗಬಾರದು. ಬೇರೆಯವರು ಆಗಬೇಕಿತ್ತು. ಆದರೂ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಟಿಎಂಸಿ ಸಂಸದರು, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಿಂಪಡೆಯುವಂತೆ ಒತ್ತಾಯಿಸಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಮಗೆ ಇನ್ನೂ ಯಾವುದೇ ಆಹ್ವಾನ ಬಂದಿಲ್ಲ. ಆಹ್ವಾನ ಬಂದರೂ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version