ರಾಜ್ಯದ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ

Prasthutha|

ಗುವಾಹಟಿ: ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಿ ಅವುಗಳನ್ನು ನೋಂದಣಿ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿತ ಮಾಡಬೇಕಿದೆ. ನಾವು ಮದರಸಾಗಳಲ್ಲಿ ಸಾಮಾನ್ಯ ಶಿಕ್ಷಣವನ್ನು ಅನುಸರಿಸಲು ಬಯಸುತ್ತೇವೆ. ಮದರಸಾಗಳಲ್ಲಿ ನೋಂದಣಿ ವ್ಯವಸ್ಥೆಯನ್ನು ಪ್ರಾರಂಭಿಸುತ್ತೇವೆ” ಎಂದು ಹೇಳಿದರು.

ನಾವು ಈ ವಿಚಾರದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಜೊತೆಯಲ್ಲಿ ಸೇರಿಸಿ ಕೆಲಸ ಮಾಡಲು ಉದ್ದೇಶಿಸಿದ್ದೇವೆ. ಅವರೂ ನಮ್ಮ ಸರ್ಕಾರಕ್ಕೆ ಸಹಾಯ ಮಾಡುವ ನಿರೀಕ್ಷೆ ಇದೆ ಎಂದು ಅಸ್ಸಾಂ ಸಿಎಂ ಹೇಳಿದರು.



Join Whatsapp