Home ಟಾಪ್ ಸುದ್ದಿಗಳು ರಾಜ್ಯದ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ

ರಾಜ್ಯದ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಿದೆ: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ

ಗುವಾಹಟಿ: ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಿ ಅವುಗಳನ್ನು ನೋಂದಣಿ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿತ ಮಾಡಬೇಕಿದೆ. ನಾವು ಮದರಸಾಗಳಲ್ಲಿ ಸಾಮಾನ್ಯ ಶಿಕ್ಷಣವನ್ನು ಅನುಸರಿಸಲು ಬಯಸುತ್ತೇವೆ. ಮದರಸಾಗಳಲ್ಲಿ ನೋಂದಣಿ ವ್ಯವಸ್ಥೆಯನ್ನು ಪ್ರಾರಂಭಿಸುತ್ತೇವೆ” ಎಂದು ಹೇಳಿದರು.

ನಾವು ಈ ವಿಚಾರದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಜೊತೆಯಲ್ಲಿ ಸೇರಿಸಿ ಕೆಲಸ ಮಾಡಲು ಉದ್ದೇಶಿಸಿದ್ದೇವೆ. ಅವರೂ ನಮ್ಮ ಸರ್ಕಾರಕ್ಕೆ ಸಹಾಯ ಮಾಡುವ ನಿರೀಕ್ಷೆ ಇದೆ ಎಂದು ಅಸ್ಸಾಂ ಸಿಎಂ ಹೇಳಿದರು.

Join Whatsapp
Exit mobile version