ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನಲ್ಲಿ ಶೀಘ್ರ ಅಂಗೀಕಾರವಾಗಲಿದೆ: ಅಮಿತ್ ಶಾ

Prasthutha|

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆ ಮತ್ತು ಸಂರಕ್ಷಣೆಗೆ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ಸಂಸತ್ತಿನಲ್ಲಿ ಅಂಗೀಕಾರವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

- Advertisement -


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಸೂದೆಯು ವಕ್ಫ್ ಆಸ್ತಿಗಳ ದುರ್ಬಳಕೆಯನ್ನು ತಡೆಗಟ್ಟುತ್ತದೆ’ ಎಂದು ಹೇಳಿದ್ದಾರೆ.


ಕಳೆದ ತಿಂಗಳು ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಆದರೆ, ಇದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಮರು ಪರಿಶೀಲನೆಗಾಗಿ ಜಂಟಿ ಸಂಸದೀಯ ಸಮಿತಿಗೆ ಕೇಂದ್ರ ಶಿಫಾರಸು ಮಾಡಿತ್ತು.

- Advertisement -


ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನಿನ ತಿದ್ದುಪಡಿಯನ್ನು ಈ ಮಸೂದೆ ಒಳಗೊಂಡಿದೆ.



Join Whatsapp