Home ಜಾಲತಾಣದಿಂದ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ನಾಮನಿರ್ದೇಶನ ರದ್ದು ಆದೇಶ ಹಿಂಪಡೆದ ಸರಕಾರ

ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ನಾಮನಿರ್ದೇಶನ ರದ್ದು ಆದೇಶ ಹಿಂಪಡೆದ ಸರಕಾರ

ಬೆಂಗಳೂರು: ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದು ಆದೇಶವನ್ನು ಸರ್ಕಾರ ಹಿಂಪಡೆದಿದೆ.

ಶಾಫಿ ಸಅದಿ ಸೇರಿದಂತೆ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ಸರಕಾರ ರದ್ದುಗೊಳಿಸಿತ್ತು.

ರಾಜ್ಯ ವಕ್ಫ್ ಬೋರ್ಡ್ ಸ್ವಾಯತ್ತ ಸಂಸ್ಥೆಯಾಗಿದ್ದು, ಸದಸ್ಯರ ಅಧಿಕಾರ ಅವಧಿಯು 5 ವರ್ಷಗಳಾಗಿರುತ್ತದೆ. ಈ ವಿಷಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂಪಡೆದು ಆದೇಶ ಹೊರಡಿಸಲಾಗಿದೆ.

Join Whatsapp
Exit mobile version