ಬೌರಿಂಗ್ , ಲೇಡಿ ಕರ್ಜನ್ ಆಸ್ಪತ್ರೆಗೆ ಉಪಕರಣ ಖರೀದಿಗೆ ವಕ್ಫ್ ಮಹಿಳಾ ಪರಿಷತ್ತಿನ ವತಿಯಿಂದ 5 ಲಕ್ಷ ರೂಗಳ ಸಹಾಯಧನ

Prasthutha|

ಬೆಂಗಳೂರು: ಅಲ್ಪಸಂಖ್ಯಾತ ಮಹಿಳೆಯರು ಹಾಗೂ ಬಡರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೋರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ರಿಜಿಡ್ ನೆಪ್ರೋಸ್ಕೋಪ್ ಖರೀದಿಸಲು ಕರ್ನಾಟಕ ಸ್ಟೇಟ್ ವಕ್ಫ್ ಫೌಂಡೇಷನ್ ಫಾರ್ ವುಮೆನ್ ಡೆವಲಪ್‌ಮೆಂಟ್ ವತಿಯಿಂದ 5 ಲಕ್ಷ ರೂಪಾಯಿಗಳ ಸಹಾಯಧನದ ಚೆಕ್ ಅನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹಸ್ತಾಂತರಿಸಿದರು. 

- Advertisement -

ಇಂದು ವಿಕಾಸಸೌಧದಲ್ಲಿ ಚೆಕ್ ಅನ್ನು ಹಸ್ತಾಂತರಿಸಿ ಮಾತನಾಡಿದ ಸಚಿವರು, ಕರ್ನಾಟಕ ಸ್ಟೇಟ್ ವಕ್ಫ್ ಫೌಂಡೇಷನ್ ಫಾರ್ ವುಮೆನ್ ಡೆವಲಪ್‌ಮೆಂಟ್ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರ ಚಿಕಿತ್ಸೆಗಾಗುವ ಖರ್ಚನ್ನು ಭರಿಸಲಾಗುತ್ತಿದೆ. ಶಿವಾಜಿನಗರದಲ್ಲಿರುವ ಸರ್ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಇನ್ಸಿಟ್ಯೂಟ್ ಸಂಸ್ಥೆಯ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಮತ್ತು ಬಡರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಈ ಸಂಸ್ಥೆಯ ಮನವಿಯಂತೆ ರಿಜಿಡ್ ನೆಪ್ರೋಸ್ಕೋಪ್ (Rigid Neproscope) ಉಪಕರಣ ಖರೀದಿಸಲು 5 ಲಕ್ಷ ರೂಪಾಯಿಗಳ ಸಹಾಯಧನವನ್ನು ನೀಡಲಾಗಿದೆ. ಎಲ್ಲರಿಗೂ ಉತ್ತಮ ಚಿಕಿತ್ಸೆ ದೊರೆಯಲಿ ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.

ಬೌರಿಂಗ್ ಆಸ್ಪತ್ರೆಯ ವೈದ್ಯರಾದ ಡಾ. ಶ್ರೀಕಾಂತ್, ಡಾ. ಅಭಿಜಿತ್, ಡಾ. ಜಹೀರ್ ಮತ್ತು ಆಹಾರ ತಜ್ಞರಾದ ಮೇಘಾ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.



Join Whatsapp