ಒಂದು ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಡ್ ಕೆಲಸ ಮುಗಿಸಬೇಕು: ಸಚಿವ ಝಮೀರ್ ಗಡುವು

Prasthutha|

ಕಲಬುರಗಿ: ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್ಡೇಟ್ ಮಾಡುವ ಕಾರ್ಯ ಮುಂದಿನ 1 ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

- Advertisement -


ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.


ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 2,566, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಹಾಗೂ ಆರ್ ಡಿಪಿಆರ್ ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಬಾಕಿ ಇವೆ. ಬಹಳ ವರ್ಷಗಳಿಂದ ಈ ಕಾರ್ಯ ನಾನಾ ಕಾರಣಕ್ಕೆ ನೆನೆಗುದ್ದಿಗೆ ಬಿದ್ದಿದ್ದು, ಇದನ್ನು ಆದ್ಯತೆ ಮೇಲೆ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

- Advertisement -


ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿ ಇದ್ದು, ಇದರಲ್ಲಿ 85 ಸಾವಿರ ಎಕರೆ ಪ್ರದೇಶ ಒತ್ತುವರಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 21,440 ಎಕರೆ ಆಸ್ತಿ ಪೈಕಿ 3,610 ಮತ್ತು ಯಾದಗಿರಿ ಜಿಲ್ಲೆಯಲ್ಲಿ 6,194 ಪೈಕಿ 123 ಎಕರೆ ಆಸ್ತಿ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಎಸ್ಪಿ ಸಹಕಾರ ಅತ್ಯಗತ್ಯವಾಗಿದೆ. ವಕ್ಫ್ ಆಸ್ತಿ ಸಾರ್ವಜನಿಕರು ಮುಸ್ಲಿಂ ಸಮಾಜಕ್ಕೆ ನೀಡಿದ ದೇಣಿಗೆ ಆಸ್ತಿಯಾಗಿದೆ. ಈ ಆಸ್ತಿ ಸಂರಕ್ಷಿಸುವುದು ಪುಣ್ಯದ ಕೆಲಸವಾಗಿದ್ದು, ಈ ಕುರಿತು ಸಮನ್ವಯತೆ ಸಾಧಿಸಬೇಕು ಎಂದು ವಕ್ಫ್ ಅಧಿಕಾರಿಗಳಾದ ಕಲಬುರಗಿಯ ಹಜರತ್ ಅಲಿ ಮತ್ತು ಯಾದಗಿರಿಯ ಜರೀನಾ ಬೇಗಂ ಅವರಿಗೆ ಸಚಿವರು ಖಡಕ್ ಸೂಚನೆ ನೀಡಿದರು.



Join Whatsapp