ಕೋವಿಡ್ ಲಸಿಕೆ ಹಾಕಿಸಿಕೊಂಡರೆ ವಾಷಿಂಗ್ ಮಶಿನ್, ಫ್ರಿಡ್ಜ್, ಟಿವಿ ಬಹುಮಾನ: ನಗರ ಸಭೆಯಿಂದ ಹೀಗೊಂದು ಘೋಷಣೆ

Prasthutha|

ಮುಂಬೈ: ಕೋವಿಡ್ ಲಸಿಕೆ ಉತ್ತೇಜಿಸಲು ಮಹಾರಾಷ್ಟ್ರದ ಚಂದ್ರಾಪುರ ನಗರಸಭೆ ಲಕ್ಕಿ ಡ್ರಾ ಬಹುಮಾನವನ್ನು ಘೋಷಿಸಿದೆ.

- Advertisement -


ಲಸಿಕೆ ಹಾಕಿಕೊಂಡರೆ ಎಲ್ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮಶೀನ್ ಉಡುಗೊರೆಯಾಗಿ ನೀಡಲಾಗುವುದು ಎಂದು ನಗರ ಸಭೆ ಹೇಳಿದೆ. ನವೆಂಬರ್ 12 ರಿಂದ 24ರವರೆಗೆ ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯುವವರು ಈ ಉಡುಗೊರೆ ಪಡೆಯಬಹುದಾಗಿದೆ.


ಈ ಅವಧಿಯಲ್ಲಿ ಲಸಿಕೆ ಪಡೆಯುವವರು ಲಕ್ಕಿ ಡ್ರಾನಲ್ಲಿ ಭಾಗವಹಿಸಬಹುದು. ಮೊದಲ ಬಹುಮಾನವಾಗಿ ರೆಫ್ರಿಜರೇಟರ್, ಎರಡನೇ ಬಹುಮಾನವಾಗಿ ವಾಷಿಂಗ್ ಮಶೀನ್ ಮತ್ತು ಮೂರನೇ ಬಹುಮಾನವಾಗಿ ಎಲ್ ಇಡಿ ಟಿವಿಗಳನ್ನು ಗೆಲ್ಲಬಹುದು. ಸಮಾಧಾನಕರ ಬಹುಮಾನವಾಗಿ 10 ಜನರಿಗೆ ಮಿಕ್ಸರ್-ಗ್ರೈಂಡರ್ ನೀಡಲಾಗುವುದು ಎಂದು ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

Join Whatsapp