ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಬುಧವಾರ ‘ಜನಸಂಕಲ್ಪ’ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ”ಕಾಂಗ್ರೆಸ್ ಪಕ್ಷದ 5 ವರ್ಷಗಳ ಆಡಳಿತದ ಅವಧಿಯಲ್ಲಿ ರಾಜ್ಯದ ಸ್ಥಿತಿಗೆ ಅಧೋಃಗತಿಗೆ ತಲುಪಿತ್ತು. ಆದರೆ, ಬಿಜೆಪಿ ಸರಕಾರವು ಕೋವಿಡ್ ಸಂಕಷ್ಟದ ನಡುವೆಯೂ ಗರಿಷ್ಠ ಸಾಧನೆ ಯನ್ನು ಸಾಧಿಸಿದೆ” ಎಂದ್ದಿದ್ದಾರೆ.
ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ 1,500 ಕೋಟಿ ನೀಡಿ ಅದರಡಿ ಕಾಮಗಾರಿ ನಡೆಸಿದ್ದರು. ಈ ವರ್ಷ ನಾನು 3 ಸಾವಿರ ಕೋಟಿ ರೂ.ಗಳ ಕ್ರಿಯಾಯೋಜನೆ ಮಾಡಿಸಿದ್ದೇನೆ. 2 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸುತ್ತಿದ್ದೇವೆ. 51 ಪಿಎಚ್‍ಸಿ ಕೇಂದ್ರ ನಿರ್ಮಿಸಲಾಗುವುದು. ಕೃಷ್ಣಾ ಮೇಲ್ದಂಡೆ ಯೋಜನೆ 5 ಸಾವಿರ ಕೋಟಿಗಿಂತ ಹೆಚ್ಚು ಅನುದಾನ ನೀಡುತ್ತೇವೆ ಎಂದರು.
ಕೇಂದ್ರ- ರಾಜ್ಯ ಸರಕಾರಗಳ ಅಭಿವೃದ್ಧಿ ಕಾರ್ಯಗಳು, ಜನಪರ ಕಾರ್ಯಕ್ರಮಗಳನ್ನು ಗಮನಿಸಿ ಬಿಜೆಪಿಯನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದರು. ಬಿಜೆಪಿ ಈ ಭಾಗದ ಅಭಿವೃದ್ಧಿಗೆ ಬದ್ಧವಾಗಿದೆ. ಕಾಂಗ್ರೆಸ್ ಸರಕಾರವು ಈ ಭಾಗದ ಅಭಿವೃದ್ಧಿಗೆ ಯಾಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಕೇಳಿದರು. ಯಾದಗಿರಿಗೆ ಮೆಡಿಕಲ್ ಕಾಲೇಜು ನೀಡಲಿದ್ದೇವೆ. ಇದನ್ನೂ ಕಾಂಗ್ರೆಸ್ ಸರಕಾರವೂ ಮಾಡಬಹುದಿತ್ತೂ , ಆದರೆ ಇಚ್ಛಾಶಕ್ತಿ ಇರದಿದ್ದರಿಂದಕಲೇ ಮಾಡಿಲ್ಲ ಎಂದರು.