Home ಟಾಪ್ ಸುದ್ದಿಗಳು ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್

ಡೆಂಗ್ಯೂ ಪಾಸಿಟಿವ್ ಬಂದವರ ಮೇಲೆ 14 ದಿನ ನಿಗಾ ವಹಿಸಿ: ದಿನೇಶ್ ಗುಂಡೂರಾವ್

ಬೆಂಗಳೂರು: ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಬೆಂಗಳೂರಿನ ಯಲಹಂಕದದಲ್ಲಿ ಇಂದು (ಜು.26) ಡೆಂಗ್ಯೂ ಹಾಟ್ ಸ್ಪಾಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.
ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ ಎಂದರು.


ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

Join Whatsapp
Exit mobile version