ಮಂಗಳೂರು: ಝಮೀರ್ ಅಹ್ಮದ್ ಖಾನ್ ವಿಧಾನಸಭಾಧ್ಯಕ್ಷರ ಸ್ಥಾನಕ್ಕೆ ಜಾತಿ, ಧರ್ಮದ ಬಣ್ಣ ಹಚ್ಚಿದ್ದಾರೆ. ಕೂಡಲೇ ಅವರಿಂದ ರಾಜೀನಾಮೆ ಪಡೆಯಬೇಕು. ಇಲ್ಲದೆ ಹೋದರೆ ಡಿ. 4ರಿಂದ ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲ ಅಧಿವೇಶನದಲ್ಲಿ ಅವರು ಹೇಗೆ ಪಾಲ್ಗೊಳ್ಳುತ್ತಾರೋ ನೋಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲ್ ಹಾಕಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಂತಹ ಹೇಳಿಕೆ ನೀಡಿರುವ ಝಮೀರ್ ಅವರನ್ನು ರಸ್ತೆಯಲ್ಲಿ ಓಡಾಡಲು ಬಿಟ್ಟಿದ್ದೇ ತಪ್ಪು. ಈಗಾಗಲೇ ಸಿಎಂ ಅವರನ್ನು ಕರೆದು ರಾಜೀನಾಮೆ ಪಡೆಯಬೇಕಿತ್ತು. ಅವರನ್ನು ಅಧಿವೇಶನದಲ್ಲಿ ಪಾಲ್ಗೊಳ್ಳಲು ಬಿಡಲಾರೆವು ಎಂದು ವಿಜಯೇಂದ್ರ ಹೇಳಿದರು.
ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಜನಪ್ರಿಯತೆ ಕಳೆದುಕೊಂಡ ಸರಕಾರವಿದ್ದರೆ ಕಾಂಗ್ರೆಸ್ ಸರಕಾರ ಎಂದು ಅವರು ಆರೋಪಿಸಿದರು.
ಲಕ್ಷ್ಮಣ ಸವದಿಯ ‘ಬಿಜೆಪಿಗೆ ಮತ್ತೆ ಹೋಗುವುದಿಲ್ಲ, ಪಲ್ಲಕ್ಕಿ ಹೊರುವ ಕೆಲಸ ಮಾಡುವುದಿಲ್ಲ’ ಎಂಬ
ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರನ್ನು ನಾವಿನ್ನೂ ಪಕ್ಷಕ್ಕೆ ಕರೆದೇ ಇಲ್ಲ ಎಂದರಲ್ಲದೆ ಪುತ್ತೂರಲ್ಲಿ ಅರುಣ್ ಪುತ್ತಿಲ ಅವರ ಬಗ್ಗೆಯೂ ವರಿಷ್ಠರ ಜತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದರು.