ಜಲ ಮಂಡಳಿ ಹಗರಣ: ಇ.ಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್

Prasthutha|

ನವದೆಹಲಿ: ದೆಹಲಿ ಜಲ ಮಂಡಳಿಯ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್ಗೆ ಸೊಪ್ಪು ಹಾಕದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಚಾರಣೆಗೆ ಗೈರಾದರು.

- Advertisement -

ಸಮನ್ಸ್ ಅನ್ನು ಕಾನೂನುಬಾಹಿರ ಎಂದು ಕರೆದಿರುವ ಆಮ್ ಆದ್ಮಿ ಪಕ್ಷ, ಕೇಂದ್ರದ ಬಿಜೆಪಿ ಸರ್ಕಾರ ಕೇಜ್ರಿವಾಲ್ ಅವರನ್ನು ಗುರಿಯಾಗಿಸಲು ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದೆ.


ದೆಹಲಿ ಜಲ ಮಂಡಳಿಯ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾ. 18ರಂದು ವಿಚಾರಣೆಗೆ ಹಾಜರಾಗಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಭಾನುವಾರ ನೋಟಿಸ್ ಜಾರಿ ಮಾಡಿತ್ತು.



Join Whatsapp