ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ, ಕೋರ್ಟ್ ಆದೇಶ ಪಾಲಿಸಿದ್ದೇವೆ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ರಾಜ್ಯ ಸರ್ಕಾರ ಮೈತ್ರಿ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸಿಲ್ಲ. ನ್ಯಾಯಾಲಯದ ಆದೇಶ ಗೌರವಿಸಿ, ಅದನ್ನು ಪಾಲಿಸಿದ್ದೇವೆ. ಜೊತೆಗೆ ನಮ್ಮ ರೈತರ ಹಿತವನ್ನು ಕಾಯಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

- Advertisement -


ಸದಾಶಿವನಗರ ನಿವಾಸ ಹಾಗೂ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿ ಶಿವಕುಮಾರ್ ಮಾತನಾಡಿ “ಕಾವೇರಿ ವಿಚಾರದಲ್ಲಿ ನಾವು ಕಾನೂನು, ಸಂವಿಧಾನ ಹಾಗೂ ಕೋರ್ಟ್ ಆದೇಶಕ್ಕೆ ಗೌರವ ನೀಡಬೇಕು. ಈ ಹಿಂದೆ ಇದ್ದ ಸರ್ಕಾರಗಳು ನ್ಯಾಯಾಲಯದ ಆದೇಶಗಳನ್ನು ಇದೇ ರೀತಿ ಪಾಲಿಸಿವೆ. ನೀರು ಬಿಡುಗಡೆ ಮಾಡಿವೆ. ಆದರೆ ನಮ್ಮ ರೈತರ ಹಿತ ಕಾಪಾಡುವುದು ನಮ್ಮ ಮೇಲಿರುವ ದೊಡ್ಡ ಜವಾಬ್ದಾರಿ” ಎಂದು ಹೇಳಿದ್ದಾರೆ.


“ನೀರು ಬಿಟ್ಟಿರುವುದನ್ನು ಪ್ರಶ್ನಿಸಿ ವಿರೋಧ ಮಾಡುತ್ತಾರೆ. ಅದು ಸಹಜ. ಸರ್ಕಾರ ಇಂತಹ ಸಮಯದಲ್ಲಿ ಸಮತೋಲಿತವಾಗಿ ಕೆಲಸ ಮಾಡಬೇಕಿದೆ. ಮಳೆ ಕಡಿಮೆ ಆಗಿರುವುದರಿಂದ ಕೃಷಿಗೆ ಮಾತ್ರವಲ್ಲ, ಕುಡಿಯಲು ನೀರಿಲ್ಲ. ಇದೇ ಕಾರಣಕ್ಕೆ ಪ್ರಾಧಿಕಾರಕ್ಕೆ ತನ್ನ ನಿರ್ಧಾರ ಪುನರ್ ಪರಿಶೀಲಿಸಲು ಮನವಿ ಮಾಡಿದ್ದೇವೆ” ಎಂದಿದ್ದಾರೆ

Join Whatsapp