ಬೆಂಗಳೂರು: ಸಾರ್ವಜನಿಕರು, ಮಾಧ್ಯಮಗಳು ಏನೇ ಬಯ್ಯಲಿ, ವಿರೋಧ ಪಕ್ಷಗಳು ವಿರೋಧಿಸಿದರು ನೀರಿನ ದರ ಏರಿಕೆ ಮಾಡುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಡಿಕೆ.ಶಿವಕುಮಾರ್ ಅವರು ಇಂದು ವಿಧಾನನಸೌಧದ ಮುಂಭಾಗದಲ್ಲಿ 110 ಹಳ್ಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದರು. ಜೊತೆಗೆ ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ ಹಾಗೂ ವರುಣಮಿತ್ರ ತರಬೇತಿ ಹಾಗೂ ಯುನೈಟೆಡ್ ನೇಷನ್ ಇನೋವೇಷನ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯುರಿಟಿ ಇನ್ ಬೆಂಗಳೂರು ಸಿಟಿ ಯೋಜನೆ ಯೋಜನೆಗಳಿಗೂ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ವಾಟರ್-ಪವರ್ ಈ ಎರಡು ಪ್ರಮುಖವಾಗಿದ್ದು, ಎರಡು ಇಲಾಖೆ ನಾನು ನೋಡ್ತಾ ಇದ್ದೇನೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಚರ್ಚೆ ನಡೆದಿತ್ತು. ನಮ್ಮ ರಾಜ್ಯದಲ್ಲಿ ಇದು ಕಷ್ಟವಾಗಲಿದೆ ಎಂದು ಮಾಹಿತಿ ನೀಡಿದ್ದೆ. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ನಂತರ ಯೋಜನೆ ಕೈ ಬಿಟ್ಟಿದ್ದೆವು. ಈಗ ನಾನು ಸಚಿವನಾದ ಮೇಲೆ ಮತ್ತೆ ಕೆಲವರು ಖಾಸಗೀಕರಣದ ಬಗ್ಗೆ ಬಂದು ಮಾತಾಡಿದ್ದರು. ನಾನು ಇದು ಆಗಲ್ಲ ಎಂದು ಹೇಳಿದ್ದೇನೆಂದು ಹೇಳಿದರು.
ವಿಧಾನಸೌಧದಲ್ಲಿ ಇಂದು ಯುನೈಟೆಡ್ ನೇಷನ್ಸ್ ಇನೋವೇಷನ್ಸ್ ಪ್ರಾಜೆಕ್ಟ್ ಫಾರ್ ವಾಟರ್ ಸೆಕ್ಯೂರಿಟಿ ಇನ್ ಬೆಂಗಳೂರು ಯೋಜನೆ ಹಾಗೂ ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮ ಮತ್ತು 110 ಹಳ್ಳಿಗಳಿಗೆ ಕಾವೇರಿ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದೆ.
— DK Shivakumar (@DKShivakumar) August 22, 2024
ನೀರು ಮತ್ತು ಇಂಧನ ಈ ಎರಡು ಪ್ರಮುಖವಾದ ಇಲಾಖೆಗಳು. ಎರಡು… pic.twitter.com/3MtazFLCLp