ಮಥುರಾ: ಜನನಿಬಿಡ ಪ್ರದೇಶದಲ್ಲಿ ಓವರ್ ಹೆಡ್ ಟ್ಯಾಂಕ್ ಕುಸಿದು ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಉತ್ತರ ಪ್ರದೇಶ ಜಲ ನಿಗಮವು ಅಮಾನತುಗೊಳಿಸಿದೆ.
ಸಹಾಯಕ ಎಂಜಿನಿಯರ್ ಲಲಿತ್ ಮೋಹನ್, ಕಿರಿಯ ಎಂಜಿನಿಯರ್ ಬೀರೇಂದ್ರ ಪಾಲ್ ಮತ್ತು ರವೀಂದ್ರ ಪ್ರತಾಪ್ ಸಿಂಗ್ ಅಮಾನತುಗೊಂಡ ಅಧಿಕಾರಿಗಳು ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಘಟನೆ ಸಂಬಂಧ ತನಿಖೆ ನಡೆಸಲು ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ಹೇಳಿಕೆ ತಿಳಿಸಿದೆ.
ಭಾನುವಾರ ಸಂಜೆ ನಗರದ ಕೃಷ್ಣ ವಿಹಾರ್ ಕಾಲೋನಿಯಲ್ಲಿ ಓವರ್ ಹೆಡ್ ಟ್ಯಾಂಕ್ ಕುಸಿದು ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದರು..